– ಆಡಳಿತ ಎನ್‌ಡಿಎ ಕೂಟಕ್ಕೆ ಭಾರೀ ಹಿನ್ನಡೆ
ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶವಿಂದು (Assembly ByPoll Result) ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಗೆಲುವು (INDIA Alliance) ಸಾಧಿಸಿದ್ದು, 7 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
13 ಕ್ಷೇತ್ರಗಳ ಪೈಕಿ ಈಗಾಗಲೇ ಹಲವು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ 2ರಲ್ಲಿ ಗೆಲುವು ಸಾಧಿಸಿದ್ದು 2 ಸ್ಥಾನಗಳಲ್ಲಿ ಮುಂದಿದೆ. ಟಿಎಂಸಿ (TMC) 3 ಸ್ಥಾನ ಗೆದ್ದಿದ್ದು, 1 ಕ್ಷೇತ್ರದಲ್ಲಿ ಮುಂದಿದೆ. ಪಶ್ಚಿಮ ಜಾರ್ಜಂಡ್ ಕ್ಷೇತ್ರವನ್ನು ಆಪ್ (AAP) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ತಮಿಳುನಾಡಿನ ಒಂದು ಕ್ಷೇತ್ರದಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ʻಮಹಾʼ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!
ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಕಂಡಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿದಿದೆ. ಇಂಡಿಯಾ ಮೈತ್ರಿಕೂಟ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ಪ್ರತಿವರ್ಷ ಜೂನ್ 25ರಂದು ʻಸಂವಿಧಾನ ಹತ್ಯಾ ದಿವಸ್ʼ ಆಚರಣೆ – ಅಮಿತ್ ಶಾ ಘೋಷಣೆ
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್, ಡೆಹ್ರಾ ಕ್ಷೇತ್ರದಿಂದ ಗೆದ್ದಿದ್ದಾರೆ. ಮತ್ತೊಂದು ಕ್ಷೇತ್ರ ನಲಗಢದಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಮುನ್ನಡೆ ಕಾಯ್ದುಕೊಂಡಿದ್ದಾರೆ.