ನವದೆಹಲಿ: ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ(DRDO) ಮತ್ತು ಭಾರತ್ ಡೈನಾಮಿಕ್ಸ್ ಜಂಟಿಯಾಗಿ ಅಭಿವೃದ್ಧಿ ಪಡಿಸಿದ ಮಹತ್ವಾಕಾಂಕ್ಷೆಯ ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿಯಾಗಿದೆ.
ಅತ್ಯಾಧುನಿಕ ಮಲ್ಟಿಪಲ್ ಇಂಡಿಪೆಂಡೆಂಟ್ ಟಾರ್ಗೆಟೆಬಲ್ ರೀ ಎಂಟ್ರಿ ವೆಹಿಕಲ್ (MIRV) ತಂತ್ರಜ್ಞಾನ ಒಳಗೊಂಡ ಅಗ್ನಿ5 ಕ್ಷಿಪಣಿ (Agni Missile) ಪರೀಕ್ಷೆ ಯಶಸ್ವಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಡಿಆರ್‌ಡಿಓ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
Advertisement
ಒಡಿಶಾದ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದು ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಗ್ನಿ5ರ ಕ್ಷಿಪಣಿ ನೆರವಿನಿಂದ ಏಕಕಾಲದಲ್ಲಿ ಕನಿಷ್ಠ 2, ಗರಿಷ್ಠ 10 ಅಣ್ವಸ್ತ್ರ ಸಿಡಿತಲೆಗಳನ್ನು ಬೇರೆ ಬೇರೆ ಗುರಿಗಳ ಮೇಲೆ ಪ್ರಯೋಗಿಸಬಹುದಾಗಿದೆ.
Advertisement
Proud of our DRDO scientists for Mission Divyastra, the first flight test of indigenously developed Agni-5 missile with Multiple Independently Targetable Re-entry Vehicle (MIRV) technology.
— Narendra Modi (@narendramodi) March 11, 2024
Advertisement
ಏನಿದು MIRV ತಂತ್ರಜ್ಞಾನ?
ಸಾಧಾರಣವಾಗಿ ಕ್ಷಿಪಣಿಗಳಲ್ಲಿ ಇರುವ ಸಿಡಿತಲೆಗಳನ್ನು ಒಂದೇ ಗುರಿಯನ್ನು ಇರಿಸಿ ಉಡಾಯಿಸಲಾಗುತ್ತದೆ. ಆದರೆ MIRV ತಂತ್ರಜ್ಞಾನದಲ್ಲಿ ಅನೇಕ ಸಿಡಿತಲೆಗಳನ್ನು ಇಟ್ಟು ಬೇರೆ ಬೇರೆ ಗುರಿಗಳ ಮೇಲೆ ಪ್ರಯೋಗಿಸಬಹುದು ಇದರಿಂದಾಗಿ ಏಕಕಾಲದಲ್ಲಿ ಹಲವು ಗುರಿಗಳನ್ನು ಛೇದಿಸಬಹುದು. ಇದನ್ನೂ ಓದಿ: ವಿದೇಶಕ್ಕೆ ಭಾರತದ ಬ್ರಹ್ಮೋಸ್ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?
Advertisement
Indigenously developed Agni-5 missile with Multiple Independently Targetable Re-Entry Vehicle ( MIRV) technology successful tested as part of Mission Divyastra today https://t.co/6NVZgWoZ4z pic.twitter.com/zsotqZtLUq
— DRDO (@DRDO_India) March 11, 2024
ಲಾಭ ಏನು?
ಒಂದೇ ಪ್ರಯೋಗದಲ್ಲಿ ಹಲವು ಗುರಿಗಳನ್ನು ಧ್ವಂಸ ಮಾಡಬಹುದು. ಇದರಿಂದ ಪದೇ ಪದೇ ಕ್ಷಿಪಣಿಯನ್ನು ಉಡಾವಣೆ ಮಾಡಿ ಬೇರೆ ಗುರಿಯ ಮೇಲೆ ಪ್ರಯೋಗ ಮಾಡುವ ಅಗತ್ಯ ಇರುವುದಿಲ್ಲ. ವಿಶೇಷವಾಗಿ ಯುದ್ಧದ ಸಂದರ್ಭದಲ್ಲಿ ಈ ತಂತ್ರಜ್ಞಾನ ನೆರವಿಗೆ ಬರಲಿದೆ. ಇದರಿಂದ ಕ್ಷಿಪಣಿ ಮತ್ತು ಲಾಂಚ್ ಮಾಡುವ ವ್ಯವಸ್ಥೆ ಭಾರೀ ಸಂಖ್ಯೆಯಲ್ಲಿ ಕಡಿಮೆಯಾಗಲಿದೆ.
ಯಾರ ಬಳಿಯಿದೆ?
ಈ ತಂತ್ರಜ್ಞಾನವನ್ನು 1960 ರ ದಶಕದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಈಗಾಗಲೇ ಅಮೆರಿಕ, ಯುಕೆ, ಫ್ರಾನ್ಸ್ ಬಳಿ MIRV ತಂತ್ರಜ್ಞಾನವಿದ್ದು ಸಬ್‌ಮರೀನ್ ಮೂಲಕ ಉಡಾವಣೆ ಮಾಡುವ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (Submarine-Launched Ballistic Missile) ಹೊಂದಿದೆ. ಚೀನಾದ ಜೊತೆ ಖಂಡಾತರ ಬ್ಯಾಲಿಸ್ಟಿಕ್ ಕ್ಷಿಪಣಿ (Intercontinental Ballistic Missile) ಇದ್ದರೆ ರಷ್ಯಾದ ಬಳಿ ಸಬ್‌ಮರೀನ್ ಜೊತೆಗೆ ಖಂಡಾತರ ಬ್ಯಾಲಿಸ್ಟಿಕ್ ಕ್ಷಿಪಣಿ ಇದೆ. ಪಾಕಿಸ್ತಾನವೂ MIRV ತಂತ್ರಜ್ಞಾನ ಇರುವ ಕ್ಷಿಪಣಿಯನ್ನು ಪ್ರಯೋಗ ಮಾಡುತ್ತಿದೆ. ಇದನ್ನೂ ಓದಿ: PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?
ಅಗ್ನಿ 5 ವಿಶೇಷತೆ ಏನು?
ಅಗ್ನಿ-5 ಕ್ಷಿಪಣಿ 5 ಸಾವಿರ ಕಿಲೋಮೀಟರ್ ದೂರದ ಗುರಿಯನ್ನು ಛೇದಿಸುವ ಸಾಮರ್ಥ್ಯ ಇದೆ. ನೆರೆಯ ಚೀನಾ (China) ಬಳಿ 12ಸಾವಿರದಿಂದ 15ಸಾವಿರ ಕಿಲೋಮೀಟರ್ ದೂರದ ಗುರಿಯನ್ನು ಬೇಧಿಸುವ ಸಾಮರ್ಥ್ಯವುಳ್ಳ ಡಾಂಗ್‌ಫೆಂಗ್-41 ಕ್ಷಿಪಣಿಗಳಿವೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಅಗ್ನಿ 5 ಕ್ಷಿಪಣಿಯನ್ನು ಭಾರತ ತಯಾರಿಸಿದೆ. 5,500 ಕಿಲೋಮೀಟರ್‌ಗಳ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯ ಅಗ್ನಿ-5 ಕ್ಷಿಪಣಿಗಿದೆ. ಚೀನಾದ ಯಾವುದೇ ಭಾಗವನ್ನು ಈ ಕ್ಷಿಪಣಿ ಮೂಲಕ ಭಾರತ ಟಾರ್ಗೆಟ್ ಮಾಡಬಹುದಾಗಿದೆ. ಅಷ್ಟೇ ಅಲ್ಲದೇ ಏಷ್ಯಾದ ಎಲ್ಲಾ ಭಾಗವನ್ನು, ಆಫ್ರಿಕಾದ ಕೆಲ ಭಾಗಗಳನ್ನು, ಯುರೋಪ್ ಖಂಡವನ್ನು ತಲುಪಬಲ್ಲ ಸಾಮರ್ಥ್ಯವನ್ನು ಹೊಂದಿದೆ.
ಅಗ್ನಿ ಕ್ಷಿಪಣಿಗಳು ಸಾಂಪ್ರದಾಯಿಕ ಮತ್ತು ಅಣ್ವಸ್ತ್ರ ಎರಡೂ ರೀತಿಯ ಸಿಡಿತಲೆಗಳನ್ನು ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿರುವುದು ವಿಶೇಷ. 1989ರಲ್ಲಿ ಮೊದಲ ಬಾರಿಗೆ ಅಗ್ನಿ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಪ್ರಯೋಗಿಸಲಾಗಿತ್ತು. ನಂತ ವಿವಿಧ ಅಗ್ನಿ ಕ್ಷಿಪಣಿಗಳ ಪರೀಕ್ಷೆಗಳನ್ನು ಡಿಆರ್‌ಡಿಒ ನಡೆಸಿಕೊಂಡು ಬಂದಿದೆ.
ಏನಿದು ಬ್ಯಾಲಿಸ್ಟಿಕ್ ಕ್ಷಿಪಣಿ?
ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಈ ಕ್ಷಿಪಣಿಗಳು ಇವು ತಮ್ಮದೇ ಆದ ಚೋದನ ಕ್ರಮಗಳಿಂದ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ, ಮತ್ತೆ ಭೂಮಿಯ ವಾತಾವರಣವನ್ನು ಮರು ಪ್ರವೇಶಿಸಿ ಭೂಮಿಯನ್ನು ಅಪ್ಪಳಿಸುವ ಸಾಮರ್ಥ್ಯ ಹೊಂದಿರುತ್ತದೆ. ವೇಗವಾಗಿ ಭೂಮಿಯ ವಾತಾವರಣವನ್ನು ಮರುಪ್ರವೇಶಿಸುವಾಗ ವಾತಾವರಣದೊಂದಿಗೆ ಘರ್ಷಣೆಯುಂಟಾಗಿ ಅತಿ ಹೆಚ್ಚಿನ ತಾಪಮಾನ ಬಿಡುಗಡೆಯಾಗುವುದರಿಂದ ಶತ್ರುಗಳ ಕ್ಷಿಪಣಿಗಳನ್ನೇ ನಾಶ ಮಾಡುವ ಸಾಮರ್ಥ್ಯ ಈ ಕ್ಷಿಪಣಿಗಳಿಗಿದೆ. ನಿಗದಿತ ಗುರಿಯನ್ನು ತಲುಪಲು ಜಿಪಿಎಸ್ ಅಳವಡಿಸಲಾಗಿರುತ್ತದೆ. ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಭೂಮಿಯಿಂದ, ಆಕಾಶದಿಂದ, ಸಮುದ್ರದಿಂದ, ಜಲಾಂತರ್ಗಾಮಿ ಅಲ್ಲದೇ ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದಾಗಿದೆ.
ಏನಿದು ಕ್ರೂಸ್ ಕ್ಷಿಪಣಿ?
ಕ್ರೂಸ್ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.