ವಾಷಿಂಗ್ಟನ್: ಯುನೈಟೆಡ್ ಕಿಂಗ್‌ಡಮ್ ಹಿಂದಿಕ್ಕಿದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿದೆ.
2021ರ ಹಣಕಾಸು ವರ್ಷದ ಕೊನೆಯ ಮೂರು ತೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಇದನ್ನೂ ಓದಿ: ಏಪ್ರಿಲ್- ಜೂನ್ GDP ಬೆಳವಣಿಗೆ 13.5% ರಷ್ಟು ಏರಿಕೆ
ಈಗಾಗಲೇ ಕೋವಿಡ್ ನೀಡಿದ ಹೊಡೆತದಿಂದ ಪಾರಾಗಲು ಹೆಣಗಾಡುತ್ತಿರುವ ಇಂಗ್ಲೆಂಡ್‌ಗೆ ಈ ವರದಿ ಮತ್ತಷ್ಟು ಹೊಡೆತ ನೀಡಿದೆ. ಇದನ್ನೂ ಓದಿ: ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು: ಮೋದಿ
ಡಾಲರ್ ವಿನಿಮಯ ದರವನ್ನು ಲೆಕ್ಕ ಹಾಕಿದಾಗ ಭಾರತೀಯ ಆರ್ಥಿಕತೆಯ ಗಾತ್ರವು 854.7 ಬಿಲಿಯನ್ ಡಾಲರ್ ಆಗಿದ್ದರೆ ಯುಕೆ ಆರ್ಥಿಕತೆ 816 ಬಿಲಿಯನ್ ಡಾಲರ್ ಆಗಿದೆ ಎಂದು ವರದಿ ತಿಳಿಸಿದೆ.
ಯುಕೆ ಎರಡನೇ ತ್ರೈಮಾಸಿಕದಲ್ಲಿ ಶೇ.1 ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿದೆ. ಮುಂದಿನ ತ್ರೈಮಾಸಿಕದಲ್ಲಿ ಇದು ಮತ್ತಷ್ಟು ಕುಸಿತ ಕಾಣುವ ಸಾಧ್ಯತೆಯಿದೆ. ಭಾರತದ ರೂಪಾಯಿ ಮುಂದೆ ಪೌಂಡ್ ಮೌಲ್ಯ ಈ ವರ್ಷ ಶೇ.8ರಷ್ಟು ಕುಸಿತ ಕಂಡಿದೆ.
ದಶಕಗಳ ಹಿಂದೆ ವಿಶ್ವದ ದೊಡ್ಡ ಆರ್ಥಿಕ ದೇಶಗಳ ಪಟ್ಟಿಯಲ್ಲಿ ಭಾರತ 11ನೇ ಸ್ಥಾನದಲ್ಲಿದ್ದರೆ ಯುಕೆ 5ನೇ ಸ್ಥಾನ ಪಡೆದಿತ್ತು. ಪ್ರಸ್ತುತ ವಿಶ್ವ ದೊಡ್ಡ ಆರ್ಥಿಕತೆ ಹೊಂದಿದ ದೇಶಗಳ ಪೈಕಿ ಅಮೆರಿಕ, ಚೀನಾ, ಜಪಾನ್, ಜರ್ಮನಿ ನಂತರದ ಸ್ಥಾನವನ್ನು ಭಾರತ ಪಡೆದಿದೆ.