– ಬುಮ್ರಾ ಮ್ಯಾಜಿಕ್, ಸೂರ್ಯ ಸ್ಟನಿಂಗ್ ಕ್ಯಾಚ್
– ಭಾರತಕ್ಕೆ ರೋಚಕ 7 ರನ್ ಜಯ
ಬ್ರಿಡ್ಜ್‌ಟೌನ್(ಬಾರ್ಬಡೋಸ್): ಶತಕೋಟಿ ಭಾರತೀಯರು ಕನಸು, ಪ್ರಾರ್ಥನೆಗೆ ಕೊನೆಗೂ ಈಡೇರಿತು. 17 ವರ್ಷದ ಬಳಿಕ ಟಿ 20 ವಿಶ್ವಕಪ್ ಗೆಲ್ಲುವ ಭಾರತದ (Team India) ಕನಸಾಗಿದೆ. ರೋಚಕ 7 ರನ್‌ಗಳ ಜಯ ಸಾಧಿಸುವುದರೊಂದಿಗೆ ಭಾರತ ಎರಡನೇ ಬಾರಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
Advertisement
ಗೆಲ್ಲಲು 177 ರನ್‌ಗಳ ಗುರಿಯನ್ನು ಪಡೆದ ದಕ್ಷಿಣ ಆಫ್ರಿಕಾ (South Africa) ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.
Advertisement
ಕೊನೆಯ 6 ಎಸೆತಗಳಲ್ಲಿ 16 ರನ್ ಬೇಕಿತ್ತು. ಪಾಡ್ಯ ಎಸೆದ ಮೊದಲ ಎಸೆತವನ್ನು ಮಿಲ್ಲರ್ ಸಿಕ್ಸರ್‌ಗೆ ಅಟ್ಟಿದರು. ಆದರೆ ಬೌಂಡರಿ ಗೆರೆಯ ಬಳಿ ಸೂರ್ಯಕುಮಾರ್ ಯಾದವ್ ಅವರು ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಮಿಲ್ಲರ್ 21 ರನ್ ಗಳಿಸಿ ಔಟ್ ಆದರು. ನಂತರ ಬಂದ ರಬಡಾ ಮೊದಲ ಎಸೆತ ಬೌಂಡರಿಗೆ ಅಟ್ಟಿದರು. ನಂತರ ಎಸೆತದಲ್ಲಿ ಲೆಗ್‌ಬೈ ಮೂಲಕ 1 ರನ್ ಬಂತು. ನಂತರ 1 ರನ್ ಒಂದು ವೈಡ್ ಬಂತು. ಐದನೇ ಎಸೆತದಲ್ಲಿ ಸಿಕ್ಸ್ ಸಿಡಿಸಲು ಹೋದ ರಬಡಾ ಕ್ಯಾಚ್ ನೀಡಿ ಔಟಾದ ಬೆನ್ನಲ್ಲೇ ಸಂಭ್ರಮಾಚರಣೆ ಆರಂಭವಾಯಿತು. ಕೊನೆಯ ಎಸೆತದಲ್ಲಿ ಒಂದು ರನ್ ಬಂತು. ಈ ಮೂಲಕ ಭಾರತ ಎರಡನೇ ಬಾರಿ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತು.
Advertisement
Advertisement
ಟೀಂ ಇಂಡಿಯಾದಂತೆ ಆರಂಭದಲ್ಲೇ ದಕ್ಷಿಣ ಆಫ್ರಿಕಾ 2 ವಿಕೆಟ್ ಕಳೆದುಕೊಂಡಿತ್ತು. ಆರಂಭಿಕ ಆಟಗಾರ ರೀಜಾ ಹೆಂಡ್ರಿಕ್ಸ್ 4 ರನ್, ನಾಯಕ ಆಡೆನ್ ಮಾರ್ಕ್ರಾಮ್ 4 ರನ್ ಗಳಿಸಿ ಔಟಾಗಿದ್ದರು. 12 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದದಾಗ ಕೀಪರ್ ಕ್ವಿಂಟಾನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ನಿಧಾನವಾಗಿ ರನ್ ಪೇರಿಸಿ ಆಫ್ರಿಕಾ ಇನ್ನಿಂಗ್ಸ್ ಕಟ್ಟ ತೊಡಗಿದರು. ಇದನ್ನೂ ಓದಿ: ಆರಂಭದಲ್ಲೇ ಆಘಾತ – ಕೊಹ್ಲಿ, ಅಕ್ಷರ್ ಸಮಯೋಚಿತ ಆಟ, ಆಫ್ರಿಕಾಗೆ 177 ರನ್ ಟಾರ್ಗೆಟ್ ನೀಡಿದ ಭಾರತ
ಮೂರನೇ ವಿಕೆಟಿಗೆ ಕ್ವಿಂಟಾನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ 38 ಎಸೆತಗಳಲ್ಲಿ 58 ರನ್ ಜೊತೆಯಾಟವಾಡಿದರು. ಸ್ಟಬ್ಸ್ 31 ರನ್ (21 ಎಸೆತ, 3 ಬೌಂಡರಿ, 1 ಸಿಕ್ಸರ್) ಗಳಿಸಿದ್ದಾಗ ಅಕ್ಷರ್ ಪಟೇಲ್ ಎಸೆತದಲ್ಲಿ ಬೌಲ್ಡ್ ಆದರು. ಕ್ವಿಂಟಾನ್ ಡಿ ಕಾಕ್ ಅವರು 39 ರನ್ (31 ಎಸೆತ, 4 ಬೌಂಡರಿ, 1 ಸಿಕ್ಸರ್), ಕ್ಲಾಸೆನ್ ಸ್ಫೋಟಕ 52 ರನ್ (27 ಎಸೆತ, 2 ಬೌಂಡರಿ, 5 ಸಿಕ್ಸರ್), ಡೇವಿಡ್ ಮಿಲ್ಲರ್ 21 ರನ್ (17 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟ್ ಆದರು.
CHAMPIONS!
Our team brings the T20 World Cup home in STYLE!
We are proud of the Indian Cricket Team.
This match was HISTORIC. 🇮🇳 🏏 🏆 pic.twitter.com/HhaKGwwEDt
— Narendra Modi (@narendramodi) June 29, 2024
ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತರೆ ಅರ್ಶ್‌ದೀಪ್ ಮತ್ತು ಬುಮ್ರಾ ತಲಾ 2 ವಿಕೆಟ್ ಪಡೆದರು, ಅಕ್ಷರ್ ಪಟೇಲ್ 1 ವಿಕೆಟ್ ಕಿತ್ತರು. 59 ಎಸೆತಗಳಲ್ಲಿ 76 ರನ್ ಹೊಡೆದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಜಸ್‌ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.