ಬೆಂಗಳೂರು: ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಪೈಲಟ್‌ಗಳಿಗೆ ದಿಕ್ಕು ತಪ್ಪಿಸುವುದನ್ನು ತಡೆಯಲು ಫೈಟರ್‌ಜೆಟ್‌ಗಳಿಗೆ ಶೀಘ್ರದಲ್ಲೇ ಡಿಜಿಟಲ್ ನಕ್ಷೆ (India Made Digital Maps) ಗಳನ್ನು ಅಳವಡಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಜ್ಜಾಗಿರುವುದಾಗಿ ಹೆಚ್‌ಎಎಲ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ.
ಡಿಜಿಟಲ್ ನಕ್ಷೆ (Digital Maps) ಹೊಂದುವುದರಿಂದ ಪೈಲಟ್‌ಗಳು ಅಚಾನಕ್ಕಾಗಿ ಗಡಿ ದಾಟುವುದಿಲ್ಲ. ಗ್ರೂಪ್ ಕ್ಯಾಪ್ಟನ್ ಅಭಿನಂದನ್ ಅವರ ರೀತಿ ಮತ್ತೊಂದು ಘಟನೆ ಸಂಭವಿಸಬಾರದು. ಅದಕ್ಕಾಗಿ ಈ ಡಿಜಿಟಲ್ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇನ್ಮುಂದೆ ಅವರು ತಮ್ಮ ಕೈಯಲ್ಲಿ ಮ್ಯಾಪ್ ಹಿಡಿದಿಟ್ಟುಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಹೆಚ್‌ಎಎಲ್‌ನ ಎಂಜಿನಿಯರಿಂಗ್ ಮತ್ತು ಆರ್&ಡಿ ವಿಭಾಗದ ನಿರ್ದೇಶಕ ಡಿ.ಕೆ ಸುನೀಲ್ ಹೇಳಿದ್ದಾರೆ.
Advertisement
Advertisement
ಡಿಜಿಟಲ್ ನಕ್ಷೆಯಿಂದ ಏನು ಅನುಕೂಲ?
ಡಿಜಿಟಲ್ ನಕ್ಷೆಯಿಂದ ವಿಮಾನ ಹಾರಾಟ ಸಂದರ್ಭದಲ್ಲಿ ಪೈಲಟ್‌ಗಳು ಕಾಕ್‌ಪಿಟ್ ಡಿಸ್‌ಪ್ಲೇನಲ್ಲಿ (Cockpit Display) ನಕ್ಷೆಯನ್ನು ಪರಿಶೀಲಿಸಬಹುದು. 2ಡಿ ಮತ್ತು 3ಡಿ ರೂಪದಲ್ಲಿ ನಕ್ಷೆ ಲಭ್ಯವಿರಲಿದ್ದು, ಪೈಲಟ್‌ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಸುತ್ತದೆ. ಹಾಗಾಗಿ ಎತ್ತರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಉಂಟಾಗುವ ಅಪಘಾತಗಳನ್ನು ತಡೆಯಲು ನೆರವಾಗುತ್ತದೆ. ಶತ್ರು ಸೇನಾ ನೆಲೆಗಳ ಬಗ್ಗೆಯೂ ಈ ನಕ್ಷೆ ಮಾಹಿತಿ ನೀಡುತ್ತದೆ ಎಂದು ಡಿ.ಕೆ ಸುನೀಲ್ ತಿಳಿಸಿದ್ದಾರೆ.
Advertisement
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಹೆಚ್ಚಿಸಲು ಡಿಜಿಟಲ್ ನಕ್ಷೆಗಳನ್ನು ಭಾರತದಲ್ಲಿ ವಿನ್ಯಾಸಗೊಳಿಸಿ ಉತ್ಪಾದಿಸಲಾಗುತ್ತದೆ. ಎಲ್ಲಾ ಫೈಟರ್ ಜೆಟ್‌ಗಳಲ್ಲೂ ಡಿಜಿಟಲ್ ನಕ್ಷೆಯನ್ನು ಅಳವಡಿಸಲಾಗುತ್ತದೆ. ಅದಕ್ಕೆ ಬೇಕಾದ ಎಲ್ಲಾ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳನ್ನೂ ದೇಶದಲ್ಲೇ ತಯಾರಿಸಲಾಗಿದೆ. ಈ ಮೊದಲು, ಈ ನಕ್ಷೆಗಳನ್ನು ವಿದೇಶದಲ್ಲಿ ಮಾತ್ರ ತಯಾರಿಸಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿಯನ್ನ ಹೆಸರಿಸಬಹುದು ಅಂತ ಊಹಿಸೋಕು ಸಾಧ್ಯವಿಲ್ಲ – ಹಾಡಿ ಹೊಗಳಿದ ಪುಟಿನ್
Advertisement
ಶತ್ರು ಸೇನೆ ವಿರುದ್ಧ ಪರಾಕ್ರಮ ಮೆರೆದಿದ್ದ ಅಭಿನಂದನ್:
2019ರ ಫೆಬ್ರವರಿ 14ರಂದು 40 ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಕಾರವಾಗಿ ಏರ್‌ಸ್ಟ್ರೈಕ್ ನಡೆಸಿ ಭಾರತ ಪ್ರತಿಕಾರ ತೀರಿಸಿಕೊಂಡಿತ್ತು. ಪಾಕಿಸ್ತಾನದ ಖೈಬರ್ ಪಕ್ತುಂಕ್ವಾ ಪ್ರದೇಶದ ಬಾಲಾಕೋಟ್‌ನಲ್ಲಿ ಜೈಷೆ ಮೊಹಮದ್ ಸಂಘಟನೆಗಳ ಉಗ್ರರ ಶಿಬಿರಗಳ ಮೇಲೆ 2019 ರ ಫೆಬ್ರವರಿ 26 ರಂದು ಭಾರತ ವೈಮಾನಿಕ ದಾಳಿ ನಡೆಸಿತ್ತು. ಇದನ್ನೂ ಓದಿ: ದೇಶ-ವಿದೇಶಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ವೈರಸ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?
ಫೆ.26ರ ನಸುಕಿನ ಜಾವ 3.30 ರಿಂದ 3.55ರ ನಡುವೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಜೈಷ್ ಉಗ್ರರ ಶಿಬಿರಗಳ ಮೇಲೆ 12 ಮಿರಾಜ್-2000 ಯುದ್ಧ ವಿಮಾನಗಳು ದಾಳಿ ನಡೆಸಿದ್ದವು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿಮೀ ಒಳನುಗ್ಗಿ ಭಾರತೀಯ ವಾಯುಪಡೆ ಈ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭಾರತ ತನ್ನ ನೆಲದಲ್ಲಿ ದೊಡ್ಡ ದಾಳಿ ನಡೆಸಿದೆ ಎಂದು ಗೊತ್ತಾದ ತಕ್ಷಣ ಪಾಕ್ ಕೂಡ ಪ್ರತಿ ದಾಳಿ ಮಾಡಿತ್ತು. ಪಾಕ್‌ನ ಪ್ರತಿದಾಳಿಯ ವೇಳೆ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ತಮ್ಮ ಮಿಗ್-21 ರಿಂದ ಪಾಕಿಸ್ತಾನದ ಎಫ್-16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು. ಅದಾದ ಬಳಿಕ ಅಭಿನಂದನ್ ಜೆಟ್‌ಗೆ ಹಾನಿಯಾಗಿತ್ತು. ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ಮೂರ್ನಾಲ್ಕು ದಿನಗಳ ಬಳಿಕ ಅವರನ್ನು ಭಾರತಕ್ಕೆ ಕರೆತರಲಾಯಿತು.
ಇಂತಹ ಯುದ್ಧದ ಸಂದರ್ಭದಲ್ಲಿ ಡಿಜಿಟಲ್ ನಕ್ಷೆಗಳು ಪೈಲಟ್‌ಗಳಿಗೆ ಅನುಕೂಲವಾಗುತ್ತವೆ, ಪೈಲಟ್‌ಗಳು ದಿಕ್ಕು ತಪ್ಪಿಹೋಗದಂತೆ ನೋಡಿಕೊಳ್ಳುತ್ತವೆ. ಗಡಿಯೊಳಗೆ ತನ್ನ ನಿಯಂತ್ರಣ ಕಾಯ್ದುಕೊಳ್ಳಲು ಸಹಾಯಕವಾಗುತ್ತದೆ. ಆದ್ದರಿಂದ ಯುದ್ಧ ವಿಮಾನಗಳಿಗೆ ಡಿಜಿಟಲ್ ನಕ್ಷೆಯನ್ನು ಅಳವಡಿಸಲು ಹೆಚ್‌ಎಎಲ್ ಮುಂದಾಗಿದೆ. ಈಗಾಗಲೇ ಈ ಕಾರ್ಯ ಆರಂಭಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ