ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಫೈನಲ್‌ನಲ್ಲಿ ಭಾರತ 50 ಓವರ್‌ಗಳಲ್ಲಿ 240 ರನ್ ಗಳಿಗೆ ಆಲೌಟ್ ಆಗಿದೆ. ಈ ಮೊತ್ತ ಭಾರತದ ಗೆಲುವಿಗೆ ಸಾಕೇ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಎದ್ದಿದೆ. ಆದ್ರೆ ವಿಶ್ವಕಪ್ ಫೈನಲ್‌ನಲ್ಲಿ ಕಡಿಮೆ ರನ್ ಗಳಿಸಿದ್ದರೂ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡು ಭಾರತ ಇತಿಹಾಸ ನಿರ್ಮಿಸಿತ್ತು.
Advertisement
1983ರ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 183 ರನ್ ಗಳಿಸಿತ್ತು. ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ತಂಡವೊಂದು ಯಶಸ್ವಿಯಾಗಿ ರಕ್ಷಿಸಿದ ಅತ್ಯಂತ ಕಡಿಮೆ ಸ್ಕೋರ್ ಅದಾಗಿದೆ.
Advertisement
Advertisement
ಅಂದು ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ್ದ ಭಾರತದ ಪರ ಮೊಹಿಂದರ್ ಅಮರ್ನಾಥ್ ಮತ್ತು ಮದನ್ ಲಾಲ್ ತಲಾ 3 ವಿಕೆಟ್ ಪಡೆದಿದ್ದರು. ಈ ಮೂಲಕ ಭಾರತದ ಬೌಲರ್ಗಳು ಬಲಿಷ್ಠ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೈನ್ಅಪ್ ಅನ್ನು 140 ರನ್‌ಗಳಿಗೆ ಆಲೌಟ್ ಮಾಡಿ ಟ್ರೋಫಿ ಗೆದ್ದಿತ್ತು. ಇದು ವಿಶ್ವ ಕಪ್ ಇತಿಹಾಸದಲ್ಲಿ ತಂಡವೊಂದು ಕನಿಷ್ಠ ಮೊತ್ತವನ್ನು ರಕ್ಷಿಸಿ ಗೆದ್ದ ಸಂದರ್ಭವಾಗಿತ್ತು. 1992ರಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ 249 ರನ್ ಬಾರಿಸಿದ್ದು ವಿಶ್ವಕಪ್ ತಂಡವೊಂದು ಯಶಸ್ವಿಯಾಗಿ ರಕ್ಷಿಸಿದ 2ನೇ ಕನಿಷ್ಠ ಮೊತ್ತವಾಗಿತ್ತು, ಆ ನಂತರ 2019ರ ವಿಶ್ವಕಪ್ ಸೆಮೀಸ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ 239 ರನ್ ಗಳಿಸಿ 18 ರನ್‌ಗಳ ಗೆಲುವು ಸಾಧಿಸಿತ್ತು.
Advertisement
ಭಾರತದ ಬ್ಯಾಟಿಂಗ್ ವೈಫಲ್ಯ: ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಬಹುದು ಎಂಬ ಅಭಿಮಾನಿಗಳ ನಿರೀಕ್ಷೆ ಸುಳ್ಳಾಗಿದೆ. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಔಟಾದ ಬಳಿಕ ಒಂದೊಂದು ರನ್ ಕದಿಯಲು ಟೀಂ ಇಂಡಿಯಾ ಹೆಣಗಾಡಿತ್ತು. ಕೊನೆಯ 10 ಓರ್‌ಗಳಲ್ಲಿ ಕೇವಲ 2 ಬೌಂಡರಿಯನ್ನಷ್ಟೇ ಬಾರಿಸಿ, 43 ರನ್ ಕಲೆಹಾಕಿತು. ಹಾಗಾಗಿ 240 ರನ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದನ್ನೂ ಓದಿ: ಫೈನಲ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್ ಬೆಂಬಲಿಗ ಅರೆಸ್ಟ್
ಚೇಸಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ 25 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿ, ಮುನ್ನಡೆದಿದೆ. ಇನ್ನುಳಿದ 25 ಓವರ್‌ಗಳಲ್ಲಿ ಗೆಲುವಿಗೆ 106 ರನ್ ಬೇಕಿದೆ. ಇದನ್ನೂ ಓದಿ: World Cup Final: ಆಸೀಸ್‌ಗೆ 241 ರನ್‌ಗಳ ಗುರಿ – ವಿಶ್ವಕಪ್‌ಗಾಗಿ ಶತಕೋಟಿ ಭಾರತೀಯರ ಪ್ರಾರ್ಥನೆ