ಕೇಪ್‌ಟೌನ್: ದಕ್ಷಿಣ ಆಫ್ರಿಕಾ (South Africa) ವಿರುದ್ಧ ಗುರುವಾರ ನಡೆದ ಅಂತಿಮ ಟೆಸ್ಟ್ ಪಂದ್ಯದ ಬಳಿಕ ಟೀಂ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ (WTC Points) ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದೆ.
2019-2023ರ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆಸೀಸ್ ವಿರುದ್ಧ ಹೀನಾಯವಾಗಿ ಸೋತಿದ್ದ ಭಾರತ (Team India) ಸತತ 2ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ 3ನೇ ಆವೃತ್ತಿಗೆ ಸಜ್ಜಾಗಿರುವ ಭಾರತ ಈಗಾಗಲೇ ನಂ.1ಪಟ್ಟಕ್ಕೆ ಜಿಗಿದಿದೆ. ಅಂತಿಮವಾಗಿ ಮೊದಲ ಎರಡು ಸ್ಥಾನಗಳಲ್ಲಿ ಬರುವ ತಂಡಗಳು ಫೈನಲ್ ಪ್ರವೇಶಿಸಲಿವೆ. ಇದನ್ನೂ ಓದಿ: ಎರಡೇ ದಿನಗಳಿಗೆ 33 ವಿಕೆಟ್ ಉಡೀಸ್; ಹರಿಣರ ನೆಲದಲ್ಲಿ ಭಾರತಕ್ಕೆ ಐತಿಹಾಸಿಕ ಜಯ – ಸರಣಿ ಸಮಬಲ
Advertisement
Advertisement
ಕಳೆದ ವರ್ಷ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡುವ ಮೂಲಕ ತನ್ನ ಸರದಿ ಆರಂಭಿಸಿತು. ವೆಸ್ಟ್ ಇಂಡೀಸ್ ವಿರುದ್ಧ 2 ಟೆಸ್ಟ್‌ನಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದ್ದ ಭಾರತ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಗೆಲುವನ್ನು ಹಂಚಿಕೊಂಡಿದೆ. ಈ ಮೂಲಕ 26 ಅಂಕಗಳು 54.16 ಪಿಸಿಟಿಯೊಂದಿಗೆ (Percentage Of Points Earned) ಅಗ್ರಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ಪಂದ್ಯದ ವೇಳೆ ರಾಮ್ ಸಿಯಾ ರಾಮ್ ಹಾಡಿಗೆ ರಾಮನಂತೆ ಬಿಲ್ಲು ಹಿಡಿದ ಕೊಹ್ಲಿ ವೀಡಿಯೋ ವೈರಲ್
Advertisement
Advertisement
ಇನ್ನುಳಿದಂತೆ ತಲಾ 12 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಕ್ರಮವಾಗಿ ಎರಡು & 3ನೇ ಸ್ಥಾನಗಳಲ್ಲಿವೆ. 42 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ಆಸೀಸ್, 12 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ಬಾಂಗ್ಲಾದೇಶ, 22 ಅಂಕಗಳೊಂದಿಗೆ 45.83 ಪಿಸಿಟಿ ಹೊಂದಿರುವ ಪಾಕಿಸ್ತಾನ, 4 ಅಂಕಗಳೊಂದಿಗೆ 16.67 ಪಿಸಿಟಿ ಹೊಂದಿರುವ ವೆಸ್ಟ್ ಇಂಡೀಸ್, 9 ಅಂಕಗಳೊಂದಿಗೆ 15 ಪಿಸಿಟಿ ಹೊಂದಿರುವ ಇಂಗ್ಲೆಂಡ್ ಹಾಗೂ ಶೂನ್ಯ ಅಂಕ, ಶೂನ್ಯ ಪಿಸಿಟಿ ಹೊಂದಿರುವ ಶ್ರೀಲಂಕಾ ತಂಡ ಕ್ರಮವಾಗಿ 4 ರಿಂದ 9ನೇ ಸ್ಥಾನಗಳಲ್ಲಿವೆ.
ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ನಡೆದ ಅಂತಿಮ ಹಾಗೂ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿ ಸಮಬಲವಾಗಿಸಿಕೊಂಡಿತು. ಕೇವಲ ಒಂದೂವರೆ ದಿನಗಳಲ್ಲಿ ಮುಕ್ತಾಯಗೊಂಡ ಈ ಪಂದ್ಯವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಚುಟುಕು ಪಂದ್ಯ ಎನಿಸಿಕೊಂಡಿತು. ಇತ್ತಂಡಗಳ ಇನ್ನಿಂಗ್ಸ್‌ಗಳಿಂದ ಒಟ್ಟು 642 ಎಸೆತಗಳು ದಾಖಲಾದವು. 1932ರಂದು ಮೆಲ್ಬರ್ನ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ 656 ಎಸೆತಗಳು ಹಾಗೂ 1935ರಲ್ಲಿ ಬ್ರಿಡ್ಜ್‌ಟೌನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ 672 ಎಸೆತಗಳು ದಾಖಲಾಗಿದ್ದು, ಈವರೆಗಿನ ಸಾಧನೆಯಾಗಿತ್ತು.