ನವದೆಹಲಿ: ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಅಸ್ಥಿರತೆ ಮುಂದುವರಿದಿದ್ದರೂ, ಭಾರತ (India) ಆತ್ಮವಿಶ್ವಾಸ ಮತ್ತು ದೃಢಸಂಕಲ್ಪದೊಂದಿಗೆ ತನ್ನ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಗುರುವಾರ ನಡೆದ ನೀತಿ ಆಯೋಗದ (NITI Aayog) ಆಡಳಿತ ಮಂಡಳಿಯ 11ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ವಿಕಸಿತ ಭಾರತ’ (Viksit Bharat) ಗುರಿಯತ್ತ ದೇಶ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿಯೂ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿಯಿಂದ ಮೋದಿ ಭೇಟಿ – ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ
ಜಾಗತಿಕ ಆರ್ಥಿಕ ಹಾಗೂ ರಾಜಕೀಯ ಸವಾಲುಗಳ ನಡುವೆಯೂ ಭಾರತ ತನ್ನ ಬೆಳವಣಿಗೆಯ ವೇಗವನ್ನು ಕಾಯ್ದುಕೊಂಡಿದೆ. ದೇಶದ ಆರ್ಥಿಕ ಪ್ರಗತಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಹಲವು ರಾಷ್ಟ್ರಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿರುವುದಾಗಿ ಹೇಳಿದರು. ಇದನ್ನೂ ಓದಿ: ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ : ಎಂಜಿಆರ್, ಜಯಲಲಿತಾ ಕೊಲ್ಲೂರಿಗೆ ನೀಡಿದ್ದೇನು?

ಈ ಒಪ್ಪಂದಗಳು ದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಹತ್ವದ ಅವಕಾಶಗಳನ್ನು ಒದಗಿಸಲಿವೆ. ಜಾಗತಿಕ ಮಾರುಕಟ್ಟೆಯ ಅವಶ್ಯಕತೆಗಳಿಗೆ ತಕ್ಕಂತೆ ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿಕೊಳ್ಳಲು ಇವು ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ ರವಿ
ದೇಶದ ಯುವಜನಸಂಖ್ಯೆ ಭಾರತದ ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ಇದು ಐತಿಹಾಸಿಕ ಅವಕಾಶವಾಗಿದೆ. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು. ಯುವಜನತೆಗೆ ಗುಣಮಟ್ಟದ ಶಿಕ್ಷಣ, ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಸಬಲಗೊಂಡ ಯುವಜನತೆಯೇ ವಿಕಸಿತ ಭಾರತದ ಕನಸನ್ನು ನನಸಾಗಿಸುವ ಪ್ರಮುಖ ಶಕ್ತಿಯಾಗಲಿದೆ ಎಂದರು. ಇದನ್ನೂ ಓದಿ: Rajya Sabha Polls | ಮಧ್ಯಪ್ರದೇಶ, ಗುಜರಾತ್‌ನಲ್ಲಿ ಅವಿರೋಧವಾಗಿ ಗೆದ್ದ ಬಿಜೆಪಿ; ರಾಜಸ್ಥಾನದಲ್ಲಿ 1 ಸ್ಥಾನ ಕಾಂಗ್ರೆಸ್ ಪಾಲು
ರಾಜ್ಯಗಳ ನಡುವಿನ ಸಂಬಂಧಗಳು ಸಹಕಾರ ಮತ್ತು ಸಂವಾದದ ಆಧಾರದ ಮೇಲೆ ಸಾಗಬೇಕು. ವಿವಿಧ ರಾಜ್ಯಗಳು ತಮ್ಮ ಉತ್ತಮ ಆಲೋಚನೆಗಳು ಮತ್ತು ಅನುಭವಗಳನ್ನು ಹಂಚಿಕೊಳ್ಳಲು ನೀತಿ ಆಯೋಗವು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಜೈಲಿನಿಂದಲೇ ಪತ್ನಿ ಕೊಲೆಗೆ ಸುಪಾರಿ – ಬುರ್ಖಾ ಧರಿಸಿ ಬಂದು ಧರ್ಮದೇಟು ತಿಂದ ಪತಿಯ ಸಹಚರರು
ಮಹಿಳಾ ನೇತೃತ್ವದ ಅಭಿವೃದ್ಧಿಯು ವಿಕಸಿತ ಭಾರತದ ಪರಿಕಲ್ಪನೆಯ ಪ್ರಮುಖ ಆಧಾರಸ್ತಂಭವಾಗಿದೆ. ಕೃಷಿ, ಸ್ಟಾರ್ಟ್ಅಪ್‌ಗಳು, ವಿಜ್ಞಾನ ಮತ್ತು ನವೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಮಹಿಳೆಯರ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸುರಕ್ಷತೆ ಮತ್ತು ಸಬಲೀಕರಣಕ್ಕೆ ರಾಜ್ಯಗಳು ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳೆಯರ ಸಂಪೂರ್ಣ ಸಾಮರ್ಥ್ಯವನ್ನು ಹೊರತಂದು ದೇಶದ ಅಭಿವೃದ್ಧಿ ಪಯಣಕ್ಕೆ ಮತ್ತಷ್ಟು ವೇಗ ನೀಡುವುದು ಅಗತ್ಯ ಎಂದು ನುಡಿದರು. ಇದನ್ನೂ ಓದಿ: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ
ಸಹಕಾರಿ ಫೆಡರಲಿಸಂನ ಮನೋಭಾವದೊಂದಿಗೆ ಕೇಂದ್ರ ಮತ್ತು ರಾಜ್ಯಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿವೆ. ವಿಕಸಿತ ಭಾರತದ ನಮ್ಮ ಸಾಮೂಹಿಕ ಕನಸನ್ನು ಸಾಕಾರಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಬಣ್ಣಿಸಿದರು. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಶುಕ್ರವಾರ ತಮಿಳುನಾಡು ಸಿಎಂ ಕೊಲ್ಲೂರು ಭೇಟಿ – ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
