-3 ಟಿ20 ಸರಣಿಗೆ ತಂಡ ಪ್ರಕಟ, ಸ್ಕೈ, ಹಾರ್ದಿಕ್ ಔಟ್
-ಏಷ್ಯನ್ ಗೇಮ್ಸ್‌ಗೆ ಜಸ್ಪ್ರೀತ್ ಬೂಮ್ರಾ ಆಯ್ಕೆ
ಮುಂಬೈ: ಇದೇ ಜೂನ್ 26ರಿಂದ ಐರ್ಲೆಂಡ್ (Ireland) ವಿರುದ್ಧ ಹಾಗೂ ಜು.1ರಿಂದ ಇಂಗ್ಲೆಂಡ್ (England) ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮತ್ತು ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ (Asian Games) ಬಿಸಿಸಿಐ (BCCI) ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ.
ಬಿಸಿಸಿಐ (BCCI) ಶ್ರೇಯಸ್ ಅಯ್ಯರ್‌ಗೆ (Shreyas Iyer) ನಾಯಕತ್ವ ನೀಡಿದ್ದು, ತಿಲಕ್ ವರ್ಮಾಗೆ (Tilak Varma) ಉಪನಾಯಕನ ಜವಾಬ್ದಾರಿ ಕೊಟ್ಟಿದೆ. ಈ ಬಾರಿ ಟಿ20 ವಿಶ್ವಕಪ್ ವಿಜೇತ ತಂಡದ ನಾಯಕನಾಗಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ಕೈಬಿಟ್ಟು, ಶ್ರೇಯಸ್ ಅಯ್ಯರ್‌ಗೆ ಬಿಸಿಸಿಐ ನಾಯಕನ ಪಟ್ಟಕಟ್ಟಿದೆ.
Presenting #TeamIndia‘s T20I squads for the tours of England & Ireland 2026 🇮🇳#ENGvIND | #IREvIND pic.twitter.com/f84kSSAIDf
— BCCI (@BCCI) June 6, 2026
ಬಿಸಿಸಿಐ 3 ಟಿ20 ಸರಣಿಗೆ ತಂಡ ಪ್ರಕಟಿಸಿದ್ದು, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿ ಕಳಪೆ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಇಬ್ಬರನ್ನೂ ಕೈಬಿಟ್ಟಿದೆ. ಐಪಿಎಲ್‌ನಲ್ಲಿ ಅಬ್ಬರಿಸಿ ಆರೇಂಜ್ ಕ್ಯಾಪ್ ಪಡೆದುಕೊಂಡಿದ್ದ ವೈಭವ್ ಸೂರ್ಯವಂಶಿಗೆ ಸ್ಥಾನ ನೀಡಿದೆ. ಇದರೊಂದಿಗೆ ವರುಣ್ ಚಕ್ರವರ್ತಿ, ಅಭಿಷೇಕ್ ಶರ್ಮಾ, ಮೊಹಮ್ಮದ್ ಸಿರಾಜ್ ಸೇರಿದಂತೆ ಅನೇಕ ಯುವ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನೂ ಸಂಜು ಸ್ಯಾಮ್ಸನ್ ಹಾಗೂ ಈಶನ್ ಕಿಶನ್ ವಿಕೆಟ್ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ. ಇನ್ನೂ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಜಸ್ಪ್ರೀತ್ ಬೂಮ್ರಾರನ್ನು ಆಯ್ಕೆ ಮಾಡಿದ್ದಾರೆ.
ಭಾರತ ಟಿ20 ತಂಡ:
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಈಶನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್ ಹಾಗೂ ವೈಭವ್ ಸೂರ್ಯವಂಶಿ
Presenting #TeamIndia‘s T20I squads for the tours of England & Ireland 2026 🇮🇳#ENGvIND | #IREvIND pic.twitter.com/f84kSSAIDf
— BCCI (@BCCI) June 6, 2026
ಏಷ್ಯನ್ ಗೇಮ್ಸ್‌ಗೆ ಭಾರತ ತಂಡ:
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಈಶನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ ಹಾಗೂ ವೈಭವ್ ಸೂರ್ಯವಂಶಿ
