ಮುಂಬೈ: ಭಾರತ (India) ಮತ್ತು ನ್ಯೂಜಿಲೆಂಡ್ (New Zealand) ನಡುವಿನ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದ ಟಿಕೆಟ್‌ಗಳನ್ನು (Ticket) ಬ್ಲ್ಯಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ರೋಷನ್ ಗುರುಬಕ್ಷನಿ ತಲಾ 1,20,000 ರೂ.ಗಳಿಗೆ ಟಿಕೆಟ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಎರಡು ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ರೋಷನ್ ಗುರುಬಕ್ಷನಿ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಿಕೆಟ್‌ಗಳ ಬ್ಲ್ಯಾಕ್ ಮಾರ್ಕೆಟಿಂಗ್‌ನಲ್ಲಿ ಭಾಗಿಯಾಗಿರುವ ಎರಡನೇ ಆರೋಪಿಯನ್ನು ಪತ್ತೆಹಚ್ಚಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್
Advertisement
Advertisement
ಮುಂಬೈನ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಪ್ರವೀಣ್ ಮುಂಢೆ ಅವರು ಕ್ರಿಕೆಟ್ ಅಭಿಮಾನಿಗಳು ವಿಶ್ವಕಪ್ ಪಂದ್ಯದ ಟಿಕೆಟ್‌ಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಸೆಣಸಾಡಲಿದೆ.ಇದನ್ನೂ ಓದಿ: ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!
Advertisement
Advertisement
ಟೀಮ್ ಇಂಡಿಯಾ ತನ್ನ ಎಲ್ಲಾ ಒಂಬತ್ತು ಲೀಗ್ ಪಂದ್ಯಗಳಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ್ದು, ಸೆಮಿಫೈನಲ್‌ಗೆ ತಲುಪಿದೆ. ನ್ಯೂಜಿಲೆಂಡ್ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಜಯಗಳಿಸುವ ಮೂಲಕ ಸೆಮಿಫೈನಲ್‌ಗೆ ಆಯ್ಕೆಯಾಗಿದೆ. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್-ಸಚಿನ್ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್ ತಂದೆ