ನವದೆಹಲಿ: ಭಾರತ ತನ್ನ ಎಲ್ಲಾ ವಯಸ್ಕ ಪ್ರಜೆಗಳಿಗೂ ಬೂಸ್ಟರ್ ಡೋಸ್‌ಗೆ ಅರ್ಹತೆ ನೀಡಲು ಚಿಂತನೆ ನಡೆಸುತ್ತಿದೆ.
ಚೀನಾ ಹಾಗೂ ಕೊರಿಯಾದಂತಹ ಕೆಲವು ರಾಷ್ಟ್ರಗಳಲ್ಲಿ ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಷ್ಟದ ದಿನಗಳನ್ನು ಅನುಭವಿಸುತ್ತಿದೆ. ಅಷ್ಟ ಅಲ್ಲದೇ ಜನರು 3ನೇ ಲಸಿಕೆ ಪಡೆಯದೇ ವಿದೇಶಗಳಿಗೆ ಪ್ರಯಾಣಿಸಲು ಕಷ್ಟಪಡುವಂತಾಗಿದೆ. ಹೀಗಾಗಿ ಸರ್ಕಾರ ಇದೀಗ ಬೂಸ್ಟರ್ ಡೋಸ್ ಬಗ್ಗೆ ಹೊಸದಾಗಿ ಚಿಂತನೆ ನಡೆಸುತ್ತಿದೆ. ಇದನ್ನೂ ಓದಿ: ಕಡ್ಡಾಯ ಮಾಸ್ಕ್ ನಿಯಮ ಕೈಬಿಡಿ – ಸರ್ಕಾರಕ್ಕೆ ತಜ್ಞರ ಸಲಹೆ
ಭಾರತದಲ್ಲಿ ಸದ್ಯ ಮುಂಚೂಣಿಯ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮಾತ್ರವೇ ಬೂಸ್ಟರ್ ಡೋಸ್ ನೀಡಲು ಸರ್ಕಾರ ಅನುಮತಿ ನೀಡಿದೆ. ಇದೀಗ ವಯಸ್ಕರಿಗೂ ಬೂಸ್ಟರ್ ಡೋಸ್ ಕೊಡಲು ನಿರ್ಧರಿಸುತ್ತಿರುವುದರಿಂದ ಕೋವಿಡ್ ಸೋಂಕಿನ ಭೀತಿ ಸ್ವಲ್ಪ ಮಟ್ಟಿಗೆ ತಗ್ಗುವ ಸಾಧ್ಯತೆಯೂ ಇದೆ.
ಏಷ್ಯಾ, ಯುರೋಪ್ ದೇಶಗಳಲ್ಲಿ ಕೋವಿಡ್ ಏರಿಕೆ ಆಗುತ್ತಿದ್ದು ಇದೀಗ ಕೇಂದ್ರ ಸರ್ಕಾರ ಕಟ್ಟೆಚ್ಚರವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ ಸಾಂಕ್ರಾಮಿಕ ರೋಗಗಳ ತಜ್ಞರು ದೇಶದಲ್ಲಿ ಕೋವಿಡ್ ಸೋಂಕಿಗೆ ಇನ್ನೂ ಹೆದರಿ ಬದುಕುವುದು ಬೇಡ. ನಾವಿನ್ನು ಮುಂದುವರಿದು ಮಾಸ್ಕ್ ಕಡ್ಡಾಯವನ್ನು ಕೈ ಬಿಡುವ ಯೋಚನೆ ಮಾಡಬೇಕೆಂದು ಸಲಹೆ ನೀಡಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪರಿಶೀಲಿಸಿದ ಮೋದಿ
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,549 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 31 ಜನರು ಸಾವನ್ನಪ್ಪಿದ್ದಾರೆ.