ಮುಂಬೈ: 2023ರ ಏಷ್ಯಾಕಪ್ ಟೂರ್ನಿಯಲ್ಲಿ (Asia Cup 2023) ಭಾರತ (India) ಹಾಗೂ ಪಾಕಿಸ್ತಾನ (Pakistan) ತಂಡಗಳು ಮತ್ತೊಮ್ಮೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
Advertisement
2023ರ ಏಷ್ಯಾಕಪ್ ಟೂರ್ನಿಯನ್ನು ಒಟ್ಟು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಭಾರತ ಹಾಗೂ ಪಾಕಿಸ್ತಾನ ಎರಡೂ ತಂಡಗಳು ಗ್ರೂಪ್ Aನಲ್ಲಿ ಸ್ಥಾನ ಪಡೆದುಕೊಂಡಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ (Asian Cricket Council) ಅಧ್ಯಕ್ಷ ಜಯ್ ಶಾ (Jay Shah) ಗುರುವಾರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗ್ರೂಪ್‍ನಲ್ಲಿ ಸ್ಥಾನ ಪಡೆದಿರುವ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಟಿ20 ಸರಣಿಯಿಂದ ಹೊರನಡೆದ ಸಂಜು ಸ್ಯಾಮ್ಸನ್ – ಸರಣಿ ಗೆಲುವಿನತ್ತ ಭಾರತದ ಚಿತ್ತ
Advertisement
Advertisement
ಗ್ರೂಪ್ Aನಲ್ಲಿ ಭಾರತ, ಪಾಕಿಸ್ತಾನ ಮತ್ತು ಅರ್ಹತಾ ಸುತ್ತಿನಲ್ಲಿ ವಿಜೇತವಾದ ತಂಡವು ಸ್ಥಾನ ಪಡೆಯಲಿದೆ. ಗ್ರೂಪ್ Bನಲ್ಲಿ ಶ್ರೀಲಂಕಾ, ಆಫ್ಘಾನಿಸ್ತಾನ, ಬಾಂಗ್ಲಾದೇಶ ಕಾಣಿಸಿಕೊಂಡಿದೆ. ಮುಂಬರುವ ಐಸಿಸಿ ಏಕದಿನ ವಿಶ್ವಕಪ್ (ODI World Cup) ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಏಷ್ಯಾಕಪ್ ಟೂರ್ನಿಯು ಏಕದಿನ ಕ್ರಿಕೆಟ್ ಮಾದರಿಯಲ್ಲಿ ಜರುಗಲಿದೆ. 2022ರ ಏಷ್ಯಾಕಪ್ ಟೂರ್ನಿ ಟಿ20 ಮಾದರಿಯಲ್ಲಿ ನಡೆದಿತ್ತು. ಇದನ್ನೂ ಓದಿ: ಪಂತ್ ಮುಂಬೈಗೆ ಏರ್‌ಲಿಫ್ಟ್
Advertisement
Presenting the @ACCMedia1 pathway structure & cricket calendars for 2023 & 2024! This signals our unparalleled efforts & passion to take this game to new heights. With cricketers across countries gearing up for spectacular performances, it promises to be a good time for cricket! pic.twitter.com/atzBO4XjIn
— Jay Shah (@JayShah) January 5, 2023
2023ರ ಏಷ್ಯಾಕಪ್ ಟೂರ್ನಿಯು ಎಲ್ಲಿ ಮತ್ತು ಯಾವಾಗ ನಡೆಯಲಿದೆ ಎನ್ನುವ ಕುರಿತಂತೆ ಯಾವುದೇ ಮಾಹಿತಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿಲ್ಲ. ಈಗಾಗಲೇ 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯದ ಹಕ್ಕನ್ನು ಪಡೆದುಕೊಂಡಿದೆ. ಒಂದು ವೇಳೆ ಪಾಕಿಸ್ತಾನದಲ್ಲೇ ಏಷ್ಯಾಕಪ್ ಟೂರ್ನಿ ನಡೆದರೆ, ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡುವುದು ಅನುಮಾನ ಎನಿಸಿದೆ. ಎರಡು ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿಯುತ್ತಿರುವ ಕಾರಣ ಭಾರತ ಟೂರ್ನಿಯಲ್ಲಿ ಭಾಗವಹಿಸುವುದು ಅನುಮಾನವಾಗಿದೆ. 2023ರ ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k