ಇಸ್ಲಾಮಾಬಾದ್: ಭಾರತ (India) ಹಾಗೂ ಪಾಕಿಸ್ತಾನದ (Pakistan) ನಡುವೆ ಇರುವ ಕಾಶ್ಮೀರದ (Kashmir) ವಿವಾದವನ್ನು ವಿಶ್ವಸಂಸ್ಥೆಯ (UN) ನಿರ್ಣಯಗಳ ಪ್ರಕಾರ ಪರಿಹರಿಸಬೇಕೆಂದು ಚೀನಾ (China) ಶನಿವಾರ ಹೇಳಿದೆ.
ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ 2 ದಿನಗಳ ಭೇಟಿಗೆ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇದು ಪಾಕಿಸ್ತಾನಕ್ಕೆ ಅವರ ಮೊದಲ ಪ್ರವಾಸವಾಗಿದೆ. ಅವರು ಶನಿವಾರ ತಮ್ಮ ಪಾಕಿಸ್ತಾನದ ಸಹವರ್ತಿ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿ ಸಭೆ ನಡೆಸಿದ್ದಾರೆ.
Advertisement
Advertisement
ವರದಿಗಳ ಪ್ರಕಾರ ಸಭೆಯಲ್ಲಿ ರಾಜಕೀಯ, ಕಾರ್ಯತಂತ್ರ, ಆರ್ಥಿಕ, ರಕ್ಷಣಾ ಭದ್ರತೆ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳು ಹಾಗೂ ಸಹಕಾರಗಳ ಬಗ್ಗೆ ಚರ್ಚಿಸಲಾಗಿದೆ. ಉಭಯ ದೇಶಗಳ ಪರಸ್ಪರ ಹಿತಾಸಕ್ತಿ, ಪ್ರದೇಶಿಕ ಹಾಗೂ ಜಾಗತಿಕ ವಿಷಗಳ ಬಗೆಯೂ ಮಾತುಕತೆ ನಡೆದಿದೆ. ದಕ್ಷಿಣ ಏಷ್ಯಾ ಭಾಗದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಎರಡೂ ಕಡೆಯವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?
Advertisement
Advertisement
ಕಾಶ್ಮೀರದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಅನೇಕ ವರ್ಷಗಳಿಂದಲೇ ಉಳಿದುಕೊಂಡಿದೆ. ಇದನ್ನು ವಿಶ್ವಸಂಸ್ಥೆಯ ಚಾರ್ಟರ್, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಹಾಗೂ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಸರಿಯಾಗಿ ಹಾಗೂ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಚೀನಾದ ವಿದೇಶಾಂಗ ಸಚಿವರು ಹೇಳಿದ್ದಾರೆ. ಆದರೆ ಅಸ್ಥಿರ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವ ಏಕಪಕ್ಷೀಯ ಕ್ರಮಗಳನ್ನು ಎರಡೂ ಕಡೆಯವರು ವಿರೋಧಿಸಿದ್ದಾರೆ.
ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಅನಗತ್ಯ ಉಲ್ಲೇಖಗಳಿಗೆ ಭಾರತ ಈ ಹಿಂದೆಯೂ ಚೀನಾ ಹಾಗೂ ಪಾಕಿಸ್ತಾನವನ್ನು ಟೀಕಿಸಿದೆ. ನಾವು ಅಂತಹ ನಿರ್ಣಯಗಳನ್ನು ಯಾವಾಗಲೂ ತಿರಸ್ಕರಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಬೇರ್ಪಡಿಸಲಾಗದ ಭಾಗಗಳಾಗಿವೆ ಎಂದು ಭಾರತ ಹೇಳಿಕೊಂಡೇ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ – ಬಿಜೆಪಿ ಲೆಕ್ಕಾಚಾರ ಏನು?