ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

Public TV
1 Min Read
HAL

ಬೆಂಗಳೂರು: ಭಾರತ ಪಾಕ್ ಉದ್ವಿಗ್ನ ಸ್ಥಿತಿ ಹಿನ್ನೆಲೆ ಬೆಂಗಳೂರಿನ(Bengaluru) ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಹೆಚ್‌ಎಎಲ್ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾಗಿದೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ


1940ರ ಡಿ. 23ರಂದು ಸ್ಥಾಪನೆಯಾದ ಹೆಚ್‌ಎಎಲ್ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್‌?- ಅತ್ತ ಪಾಕ್‌ ಸೂಪರ್‌ ಲೀಗ್‌ ದುಬೈಗೆ ಶಿಫ್ಟ್‌

ಏ. 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ(Pahalgam Terror Attack) ನಡೆಸಿದ್ದು, ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕ್ ಉಗ್ರರ 9 ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು. ಇದೀಗ ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದೇಶದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Share This Article