ನವದೆಹಲಿ: ಗುರುವಾರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,033 ಮಂದಿಗೆ ಕೊರೊನಾ ಬಂದರೆ 43 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ ಕೋವಿಡ್‍ನಿಂದಾಗಿ ಭಾರತದಲ್ಲಿ ಒಟ್ಟು 5,21,530 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 11,639 ರಷ್ಟಿದೆ. ಪಾಸಿಟಿವಿಟಿ ದರ ಶೇ.0.21 ಇದೆ. ಕಳೆದ ವಾರ ಶೇ.0.22 ಇತ್ತು. ಇಲ್ಲಿಯವರೆಗೆ 4,24,98,789 ಮಂದಿ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ
Advertisement
Advertisement
ಆರೋಗ್ಯ ಸಚಿವಾಲಯ ಹೊರಡಿಸಿದ ಅಂಕಿಅಂಶಗಳ ಪ್ರಕಾರ, ಇದುವರೆಗೆ 79.25 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 4,24,98,789 ಮಂದಿಗೆ ಪರೀಕ್ಷೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ
Advertisement
Advertisement
ಮುಂಬೈನಲ್ಲಿ ಕೋವಿಡ್-19ನ `ಎಕ್ಸ್‌ಇ` ರೂಪಾಂತರದ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಹೇಳಿದೆ. ಆದಾಗ್ಯೂ, ಕೇಂದ್ರ ಆರೋಗ್ಯ ಸಚಿವಾಲಯವು ದೇಶದಲ್ಲಿ ಮೊದಲ ‘ಎಕ್ಸ್‍ಇ’ ರೂಪಾಂತರದ ಪತ್ತೆಯನ್ನು ಇನ್ನೂ ಖಚಿತಪಡಿಸಿಲ್ಲ.