ನವದೆಹಲಿ: ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ (Howard Lutnick) ಹೇಳಿಕೆಗಳನ್ನು ತಿರಸ್ಕರಿಸಿದ ಭಾರತ (India) ತಿರಸ್ಕರಿಸಿದೆ. ಲುಟ್ನಿಕ್ ಹೇಳಿಕೆಗಳು ನಿಖರವಾಗಿಲ್ಲ ಎಂದ MEA ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಭಾರತವು ಅಮೆರಿಕದೊಂದಿಗೆ (US) ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದದಲ್ಲಿ ಆಸಕ್ತಿ ಹೊಂದಿದೆ. ಸಮತೋಲಿತ ಮತ್ತು ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದಕ್ಕೆ ತಲುಪಲು ಭಾರತ ಮತ್ತು ಅಮೆರಿಕ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಿವೆ ಎಂದು ಜೈಸ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ: ಅಮೆರಿಕ
ಹಲವು ಹಂತಗಳಲ್ಲಿ ಎರಡು ದೇಶಗಳು ಒಪ್ಪಂದಕ್ಕೆ ಸಹಮತ ವ್ಯಕ್ತಪಡಿಸಿದ್ದವು. ಎರಡು ಪೂರಕ ಆರ್ಥಿಕತೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದದಲ್ಲಿ ನಾವು ಆಸಕ್ತಿ ಹೊಂದಿದ್ದೇವೆ. ಒಪ್ಪಂದ ಅಂತಿಮಗೊಳಿಸಲು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆ ಮಾಡದ ಕಾರಣ, ದೀರ್ಘ ಕಾಲದಿಂದ ಚರ್ಚಿಸಲಾಗಿದ್ದ ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದವು ಕಾರ್ಯರೂಪಕ್ಕೆ ಬರಲು ವಿಫಲವಾಗಿದೆ ಎಂದು ಸೂಚಿಸುವ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಭಾರತದ ಮೇಲೆ 500% ಸುಂಕ? – ಮಸೂದೆಗೆ ಟ್ರಂಪ್ ಒಪ್ಪಿಗೆ

