ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಸ್ಟೇಟ್ ವಿಭಾಗ ವರದಿಯೊಂದನ್ನು ಭಾರತ ತಿರಸ್ಕರಿಸಿದೆ.
ಕೆಲ ಬಿಜೆಪಿ ನಾಯಕರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಭಾಷಣಗಳನ್ನು ಮಾಡಿದ್ದಾರೆ. ಅಲ್ಪಸಂಖ್ಯಾತರ ಮೇಲೆ ಹಿಂದೂ ಗುಂಪುಗಳ ಜನಸಮೂಹ ದಾಳಿಗಳು ವರ್ಷಪೂರ್ತಿ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.
Advertisement
Advertisement
ಯುಎಸ್ ಸ್ಟೇಟ್ ವಿಭಾಗವು ತನ್ನ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ವರದಿ 2018ರಲ್ಲಿ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತು ವರದಿ ಮಾಡಿದೆ. ಅದರಲ್ಲಿ ಗೋ ಹತ್ಯೆ ದಾಳಿ, ಕೊಲೆಗಳು, ಜನಸಮೂಹ ಹಿಂಸೆ ಮತ್ತು ಬೆದರಿಕೆಗಳ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೆ ಬಿಜೆಪಿ ರಾಜಕೀಯ ಪಕ್ಷಪಾತದಿಂದ ಕೂಡಿದೆ. ಅಲ್ಪಸಂಖ್ಯಾತರ ಬಗ್ಗೆ ಕೆಲ ಬಿಜೆಪಿ ನಾಯಕರು ಅವಹೇಳನಾಕಾರಿ ಹೇಳಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
Advertisement
Advertisement
ಈ ವರದಿ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಪ್ರತಿಕ್ರಿಯಿಸಿ, ಭಾರತ ಜಾತ್ಯಾತೀತ ದೇಶ. ಇಲ್ಲಿ ಅಲ್ಪಸಂಖ್ಯಾತರಿಗೂ ಸೇರಿಸಿ ಎಲ್ಲಾ ಸಮುದಾಯದವರಿಗೂ ಸಂವಿಧಾನಾತ್ಮವಾಗಿ ಮೂಲಭೂತ ಹಕ್ಕುಗಳುನ್ನು ನೀಡಲಾಗಿದೆ. ದೇಶದಲ್ಲಿನ ನಾಗರಿಕ ಹಕ್ಕುಗಳ ಸ್ಥಿತಿ ಕುರಿತಾಗಿ ಪ್ರಕಟಿಸಿರುವ ಈ ವಿದೇಶಿ ವರದಿಯಲ್ಲಿ ಭಾರತಕ್ಕೆ ಯಾವುದೇ ವಿಶ್ವಾಸಾರ್ಹತೆ ಅಂಶಗಳು ಕಾಣುತ್ತಿಲ್ಲ ಎಂದು ಹೇಳಿದರು.
ಭಾರತವು ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದೆ. ಇಲ್ಲಿನ ಸಂವಿಧಾನವು ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆ, ಪ್ರಜಾಪ್ರಭುತ್ವ ಆಡಳಿತ ಮತ್ತು ಕಾನೂನಿನ ನಿಯಮವು ಮೂಲಭೂತ ಹಕ್ಕುಗಳನ್ನು ಉತ್ತೇಜಿಸುತ್ತದೆ ಮತ್ತು ರಕ್ಷಿಸುತ್ತದೆ ಎನ್ನುವ ಮೂಲಕ ಯುಎಸ್ ವರದಿಯನ್ನು ತಿರಸ್ಕರಿಸಿದೆ.
MEA on the latest report on International religious freedom published by US Department of State: India is proud of its secular credentials, it's status as the largest democracy and a pluralistic society with a longstanding commitment to tolerance and inclusion. 1/2
— ANI (@ANI) June 23, 2019
ಬಿಜೆಪಿ ಮಾಧ್ಯಮ ಮುಖ್ಯಸ್ಥ ಹಾಗೂ ಸಂಸದ ಅನಿಲ್ ಬಲೂನಿ ಅವರು ಕೂಡ ಈ ವರದಿಯನ್ನು ಖಂಡಿಸಿದ್ದಾರೆ. ಅಲ್ಲದೆ ಈ ವರದಿಯಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿ ಸರ್ಕಾರ ವಿರುದ್ಧ ಪಕ್ಷಪಾತ ಮಾಡಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]