ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಹುಟ್ಟಿಸಿದೆ. ಕಳೆದ 24 ಗಂಟೆಯಲ್ಲಿ 3,303 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2,563 ಮಂದಿ ಗುಣಮುಖವಾಗಿದ್ದಾರೆ. ಆದರೆ ಈ ನಡುವೆ ಪಾಸಿಟಿವಿಟಿ ದರ 0.66%ಕ್ಕೆ ಏರಿಕೆಯಾಗಿದ್ದು ಆತಂಕ ಹೆಚ್ಚಾಗುವಂತೆ ಮಾಡಿದೆ.
Advertisement
ಕಳೆದ ನಾಲ್ಕೈದು ದಿನಗಳಿಂದ ಎರಡರಿಂದ ಎರಡೂವರೆ ಸಾವಿರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದ್ದು, ಮುಂದಿನ ಎರಡು ಮೂರು ವಾರಗಳಲ್ಲಿ ಸೋಂಕು ತೀವ್ರವಾಗಿ ಹರಡಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ಮೇಲಿಂದ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿ ಸಾವು – ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
Advertisement
Advertisement
ಸೋಂಕು ಹೆಚ್ಚುತ್ತಿರುವ ಹಿನ್ನಲೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಸಭೆಯಲ್ಲಿ 3ಟಿ ಬಗ್ಗೆ ಉಲ್ಲೇಖಿಸಿದ್ದ ಅವರು, ಕೊರೊನಾ ಇನ್ನು ಅಂತ್ಯವಾಗಿಲ್ಲ, ಸೋಂಕು ಹೆಚ್ಚುತ್ತಿರುವ ಹಿನ್ನಲೆ ಟೆಸ್ಟ್ ಟ್ರಿಟ್ಮೆಂಟ್ ಹಾಗೂ ಟ್ರೇಸ್ ಅನ್ನು ಮುಖ್ಯವಾಗಿ ರಾಜ್ಯ ಸರ್ಕಾರಗಳು ಮಾಡಬೇಕು ಎಂದು ತಿಳಿಸಿದರು.
Advertisement
ವ್ಯಾಕ್ಸಿನ್‍ಗೆ ಆದ್ಯತೆ ನೀಡಬೇಕು, ವ್ಯಾಕ್ಸಿನ್ ಏಕ ಮಾತ್ರ ಮಾರ್ಗ ಕೋವಿಡ್ ವಿರುದ್ಧ ಹೋರಾಡುವ ಶಕ್ತಿ ನೀಡಲಿದ್ದು, ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ತೀವ್ರಗೊಳಿಸಿ ಮತ್ತು ವಯಸ್ಕರಿಗೆ ಬೂಸ್ಟರ್ ಅಥವಾ ಮುನ್ನೆಚ್ಚರಿಕೆ ಡೋಸ್ ಪಡೆಯಲು ಪ್ರೇರೆಪಿಸಿ ಎಂದು ಮೋದಿ ಕರೆ ನೀಡಿದ್ದಾರೆ. ಇದನ್ನೂ ಓದಿ: ಹಲಾಲ್ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್ ಅಬ್ದುಲ್ಲಾ ಪ್ರಶ್ನೆ