Connect with us

Corona

ದೇಶದಲ್ಲಿ 3.8 ಲಕ್ಷ ಮಂದಿಗೆ ಕೊರೊನಾ – ಒಂದೇ ದಿನ 3,645 ಮಂದಿ ಬಲಿ

Published

on

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಮತ್ತು ಮೃತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 3,645 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ. ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೊರೊನಾ ಎರಡನೇ ಅಲೆಯ ಆತಂಕ ಜನರಲ್ಲಿ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 3,79,257 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕಳೆದ ಒಂದು ವಾರದಿಂದ ಪ್ರತಿ ದಿನ 3 ಲಕ್ಷಕ್ಕೂ ಅಧಿಕರ ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದುವರೆಗೂ ಕೊರೊನಾದಿಂದ ಮೃತರಾದವರ ಸಂಖ್ಯೆ 2.04 ಲಕ್ಷದ ಗಡಿ ದಾಡಿದೆ. ಕೊರೊನಾದಿಂದ ಮೃತರ ಸಂಖ್ಯೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕ, ಬ್ರೆಜಿಲ್ ಮತ್ತು ಮೆಕ್ಸಿಕೋ ಮೊದಲ ಮೂರು ಸ್ಥಾನಗಳಲ್ಲಿವೆ.

Click to comment

Leave a Reply

Your email address will not be published. Required fields are marked *