Connect with us

ದೇಶದಲ್ಲಿ 3,92,488 ಹೊಸ ಪ್ರಕರಣ- 3,689 ಮಂದಿ ಕೊರೊನಾಗೆ ಬಲಿ

ದೇಶದಲ್ಲಿ 3,92,488 ಹೊಸ ಪ್ರಕರಣ- 3,689 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಒಂದೇ ದಿನ 3,92,488 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,689 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ದೇಶದಲ್ಲಿ 2,15,542 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ.

3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 33,49,644 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು 15,68,16,031 ಮಂದಿ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

ದೇಶದಲ್ಲಿ ನಿನ್ನೆ ಒಂದೇ ದಿನ 18,04,954 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 29,01,42,339 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Advertisement
Advertisement