ತಿರುವನಂತಪುರಂ: ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯುಎಇಯಿಂದ ವಾಪಸ್ ಆಗಿದ್ದ ಕೇರಳದ 35 ವರ್ಷ ಪ್ರಾಯದ ವ್ಯಕ್ತಿಯೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
Advertisement
ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ಕೊಲ್ಲಂನ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಅತನನ್ನು ಆಸ್ಪತ್ರೆಗೆ ದಾಖಲಿಸಿ ಮಾದರಿಗಳನ್ನು ಪರೀಕ್ಷೆ ನಡೆಸಿದಾಗ ಬಳಿಕ ಸೋಂಕು ಇರುವುದು ಖಚಿತಗೊಂಡಿದೆ. ಇದೀಗ ಸೋಂಕು ಖಚಿತಗೊಂಡಂತೆ ಆ ವ್ಯಕ್ತಿಯನ್ನು ಸಂಪರ್ಕ ಹೊಂದಿದವರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 1,068, ರಾಜ್ಯದಲ್ಲಿ 1,209 ಮಂದಿಗೆ ಕೊರೊನಾ – 1 ಸಾವು
Advertisement
Advertisement
ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‍ಐವಿ) ಕಳುಹಿಸಲಾಗಿದೆ ಎಂದು ನಿನ್ನೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಪರೀಕ್ಷೆಯ ಫಲಿತಾಂಶ ಬಂದಿದ್ದು ಅತನಿಗೆ ಮಂಕಿಪಾಕ್ಸ್ ಸೋಂಕು ಇರುವುದು ಖಚಿತಗೊಂಡಿದೆ. ಇದನ್ನೂ ಓದಿ: ಬೆಂಗಳೂರು ಜನರಿಗೆ ಗುಡ್ ನ್ಯೂಸ್ – ಇನ್ಮುಂದೆ ಉದ್ಯಾನಗಳು ರಾತ್ರಿ 8ರ ವರೆಗೂ ಓಪನ್
Advertisement
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ ಎಂದು ಮಾಹಿತಿ ಹಂಚಿಕೊಂಡಿತ್ತು. 1970ರಲ್ಲಿ ಮೊದಲ ಬಾರಿಗೆ ಕಾಂಗೋ ದೇಶದಲ್ಲಿ ಮಾನವನಲ್ಲಿ ಪತ್ತೆಯಾಯಿತು. ಈ ರೋಗ ಹೆಚ್ಚಾಗಿ ಆಫ್ರಿಕಾದಲ್ಲಿ ವಾಸಿಸುವವರಲ್ಲಿ ಕಂಡು ಬಂದಿದೆ. ಮಂಕಿಪಾಕ್ಸ್ ವೈರಸ್ ಇಲಿಗಳಲ್ಲಿ ಮತ್ತು ಕೋತಿಗಳಲ್ಲಿ ಹರಡುವುದು ಸಾಮಾನ್ಯ. ಸೋಂಕಾದ ಪ್ರಾಣಿಗಳು ಮನುಷ್ಯನ ಸಂಪರ್ಕ ಪಡೆದಾಗ ಅವರಿಗೂ ಹರಡುವ ಸಾಧ್ಯತೆ ಇರುತ್ತದೆ.