ನವದೆಹಲಿ: ಭಾರತ ಮತ್ತು ರಷ್ಯಾ ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರ ಹೆಚ್ಚಿಸಲು `ವಿಷನ್ 2030′ (Vision 2030) ದಾಖಲೆಗೆ ಸಹಿ ಹಾಕಿವೆ. ಈ ಮೂಲಕ ಉಭಯ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುವ ಜೊತೆಗೆ ಹಲವಾರು ವ್ಯಾಪಾರ ಮಾರ್ಗಗಳನ್ನ ತೆರೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದರು.
Addressing the joint press meet with President Putin.@KremlinRussia_E https://t.co/ECjpvWj7CF
— Narendra Modi (@narendramodi) December 5, 2025
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಜೊತೆಗಿನ ದ್ವಿಪಕ್ಷೀಯ ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಆರ್ಥಿಕ ಸಹಕಾರ ಮತ್ತಷ್ಟು ಹೆಚ್ಚಿಸಲು, ನಾವು ʻವಿಷನ್ 2030ʼ ದಾಖಲೆಗೆ ಸಹಿ ಹಾಕಿದ್ದೇವೆ. ಇಂದು, ನಾವಿಬ್ಬರೂ ಭಾರತ-ರಷ್ಯಾ ವ್ಯಾಪಾರ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ಈ ಒಪ್ಪಂದವು ಆದ್ಯತೆಯ ಕ್ಷೇತ್ರಗಳಲ್ಲಿ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಜೊತೆಗೆ ಎರಡೂ ದೇಶಗಳ ನಡುವಿನ ದೀರ್ಘಕಾಲೀನ ಆರ್ಥಿಕ ಸಂಬಂಧವನ್ನ ಇನ್ನಷ್ಟು ಬಲಪಡಿಸುತ್ತದೆ. ಅಲ್ಲದೇ ಸಹ-ಉತ್ಪಾದನೆ ಮತ್ತು ಸಹ-ನಾವೀನ್ಯತೆಗಾಗಿ ಹೊಸ ಮಾರ್ಗಗಳನ್ನ ತೆರೆಯುತ್ತವೆ ಎನ್ನೋ ವಿಶ್ವಾಸ ನನಗಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್ ವೀಸಾ ನೀಡಲು ಭಾರತ ಅಸ್ತು
My remarks during meeting with President Putin. https://t.co/VCcSpgZmWx
— Narendra Modi (@narendramodi) December 5, 2025
ಯುರೇಷಿಯನ್ ಆರ್ಥಿಕ ಒಕ್ಕೂಟದೊಂದಿಗೆ FTA ಅನ್ನು ಸಾಕಾರಗೊಳಿಸಲು ಎರಡೂ ದೇಶಗಳು ಹೊಸ ಕ್ರಮಗಳನ್ನ ತೆಗೆದುಕೊಳ್ಳುತ್ತಿವೆ ಎಂದರು. ಇದೇ ಸಮಯದಲ್ಲಿ ಭಯೋತ್ಪಾದನೆಯ ವಿಷಯದಲ್ಲಿ ಜಾಗತಿಕ ಏಕತೆಯನ್ನು ಕೋರಿದ ಪ್ರಧಾನಿ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ – ರಷ್ಯಾ ಒಟ್ಟಾಗಿ ಸಾಗಲಿವೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ – ಪಹಲ್ಗಾಮ್ ನರಮೇಧ ಉಲ್ಲೇಖಿಸಿ ಮೋದಿ ಮಾತು
ಇನ್ನೂ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪುಟಿನ್, ಭಾರತದಲ್ಲಿ ತಮಗೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ಅಧ್ಯಕ್ಷೆ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. ಭಾರತ ಮತ್ತು ರಷ್ಯಾ ನಡುವಿನ ಅಭಿವೃದ್ಧಿ ಹೆಚ್ಚಿಸಲು ನಾನು, ಪ್ರಧಾನಿ ಮೋದಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು


