ಶಿವಮೊಗ್ಗ: ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಶಯ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣ ವ್ಯಾಸಂಗಕ್ಕೆ ಉಕ್ರೇನ್‌ಗೆ ತೆರಳಿದ್ದ ರಾಜ್ಯದ ನೂರಾರು ವಿದ್ಯಾರ್ಥಿಗಳು, ಉಕ್ರೇನ್ ಯುದ್ದ ಭೂಮಿಯಲ್ಲಿ ಸಿಲುಕಿದ್ದಾರೆ. ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉತ್ತಮ ಶಿಕ್ಷಣ ದೊರೆತಿದ್ದರೆ, ಅಲ್ಲಿಗೆ ಯಾರು ಹೋಗುತ್ತಾರೆ? ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ದೊರೆಯುವಂತೆ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಷ್ಯಾ ಯುದ್ಧ: 2 ಸಾವಿರ ಉಕ್ರೇನ್ ನಾಗರಿಕರು ಸಾವು
ಶಿಕ್ಷಣ ವ್ಯವಸ್ಥೆಯಲ್ಲಿ ಈಗ ಇರುವ ಕಾನೂನು ಬದಲಾವಣೆ ಮಾಡಬೇಕು. ಶಿಕ್ಷಣದ ಫೀಜ್ ಕಡಿಮೆ ಮಾಡಬೇಕು. ಈ ಬಗ್ಗೆ ಒಂದು ಅಭಿಯಾನವೇ ಆರಂಭಿಸಬೇಕಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನೂರಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಇವರಲ್ಲಿ ಈಗಾಗಲೇ ಹಲವರು ವಾಪಸ್ಸಾಗಿದ್ದಾರೆ. ಇನ್ನೂ ಕೆಲವರು ಅಲ್ಲಿಯೇ ಇದ್ದಾರೆ. ಈಗಾಗಲೇ ಓರ್ವ ವಿದ್ಯಾರ್ಥಿ ಸಹ ಮೃತಪಟ್ಟಿದ್ದಾನೆ. ಹೀಗಾಗಿ ಸಹಜವಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಕೇಂದ್ರ ಸರ್ಕಾರ ವಿಳಂಬ ಮಾಡದೇ ರಾಜ್ಯ ಹಾಗೂ ದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ