ನವದೆಹಲಿ: ಭಾರತ (India) ಮತ್ತು ಅರ್ಜೆಂಟೀನಾ (Argentina) ನಡುವೆ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ.
ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟ್ವಿಟ್ಟರ್ ಮೂಲಕ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್ – ಟ್ರಂಪ್‌ಗೆ ಬೆಂಬಲ
Advertisement
A Historic Day for ????????
Under the leadership of PM Shri @narendramodi ji, the country achieves a new milestone in securing #CriticalMinerals4India
India and Argentina sign agreement for exploration and mining of 5 lithium blocks in Argentina’s Catamarca province.
The agreement… pic.twitter.com/LVqtbb5jkw
— Pralhad Joshi (@JoshiPralhad) January 15, 2024
Advertisement
ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್‌ಗಳಲ್ಲಿ ಗಣಿಗಾರಿಕೆ (Lithium Mining) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಂಎಸ್ ಧೋನಿಗೆ ಆಹ್ವಾನ
Advertisement
ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ; ಇಂದಿನಿಂದ ಪೂಜಾಕಾರ್ಯ ಆರಂಭ – ಯಾವ ದಿನ ಏನು ಕಾರ್ಯಕ್ರಮ?
Advertisement
ಈ ಒಪ್ಪಂದದಿಂದ ಎರಡೂ ದೇಶಗಳ ಲಿಥಿಯಂ ಗಣಿಗಾರಿಕೆ ಮತ್ತು ಡೌನ್‌ಸ್ಟ್ರೀಮ್ ವಲಯಗಳನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಾಗತಿಕ ನಿವ್ವಳ ಶೂನ್ಯ ಗುರಿಗಳನ್ನು ಸಾಧಿಸಲು ನಿರ್ಣಾಯಕ ವಸ್ತುಗಳಿಗೆ ಪೂರೈಕೆ, ವೈವಿಧ್ಯೀಕರಣವನ್ನು ಸಹ ಸುಗಮಗೊಳಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನನಗೆ ತುಂಬಾ ಖುಷಿಯಾಗಿದೆ: ಅಯೋಧ್ಯೆ ರಾಮಮಂದಿರಕ್ಕೆ ಮಗ ಕೆತ್ತಿರುವ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿದ್ದಕ್ಕೆ ತಾಯಿ ಸಂತಸ