– ಜಮ್ಮು & ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗ: ಪಾಕ್ ಎದುರು ಭಾರತ ಹೇಳಿಕೆ
ನವದೆಹಲಿ: ವಿಶ್ವಸಂಸ್ಥೆಯಲ್ಲಿ ಜಮ್ಮು-ಕಾಶ್ಮೀರದ (Jammu & Kashmir) ಬಗ್ಗೆ ಮಾತನಾಡಿದ ಪಾಕಿಸ್ತಾನ (Pakistan) ಮುಖಭಂಗ ಅನುಭವಿಸಿದೆ. ಭಾರತದ (India) ಕಟು ಟೀಕೆಗೆ ಗುರಿಯಾಗಿದ್ದು, ಪ್ರಪಂಚದ ಮುಂದೆ ಅವಮಾನಿತರಾಗಿ ತೀವ್ರ ಮುಜುಗರಕ್ಕೊಳಗಾಗಿದೆ.
ಅಂತರರಾಷ್ಟ್ರೀಯ ಇಸ್ಲಾಮೋಫೋಬಿಯಾ ನಿಗ್ರಹ ದಿನವನ್ನು ಆಚರಿಸಲು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯಲ್ಲಿ ಆಯೋಜಿಸಲಾದ ಅನೌಪಚಾರಿಕ ಸಭೆಯಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ, ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದರು. ಇದನ್ನೂ ಓದಿ: ಪಾಕಿಸ್ತಾನ, ಭೂತಾನ್ ಸೇರಿ 41 ರಾಷ್ಟ್ರಗಳ ಪ್ರಜೆಗಳ ಯುಎಸ್ ಪ್ರಯಾಣಕ್ಕೆ ನಿರ್ಬಂಧ ಸಾಧ್ಯತೆ
ಇತ್ತೀಚೆಗೆ ಪೂಜಾ ಸ್ಥಳಗಳು ಮತ್ತು ಧಾರ್ಮಿಕ ಸಮುದಾಯಗಳನ್ನು ಗುರಿಯಾಗಿಸಿಕೊಂಡ ಹಿಂಸಾಚಾರದಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಎಲ್ಲಾ ಧರ್ಮಗಳಿಗೆ ಸಮಾನ ಗೌರವದ ತತ್ವಕ್ಕೆ ಎಲ್ಲಾ ಸದಸ್ಯ ರಾಷ್ಟ್ರಗಳು ನಿರಂತರ ಬದ್ಧವಾಗಿರಬೇಕು. ಎಲ್ಲಾ ದೇಶಗಳು ತಮ್ಮ ಎಲ್ಲಾ ನಾಗರಿಕರನ್ನು ಸಮಾನವಾಗಿ ಪರಿಗಣಿಸಲು ಬದ್ಧವಾಗಿರಬೇಕು. ಅವರು ಧಾರ್ಮಿಕ ತಾರತಮ್ಯವನ್ನು ಉತ್ತೇಜಿಸುವ ನೀತಿಗಳನ್ನು ಅನುಸರಿಸಬಾರದು ಎಂದು ತೆಹ್ಮಿನಾ ಜಂಜುವಾ ಹೇಳಿದರು.
ಇದಕ್ಕೆ ತಿರುಗೇಟು ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪಿ. ಹರೀಶ್, ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಅನುಚಿತ ಉಲ್ಲೇಖ ಮಾಡಿದ್ದಾರೆ. ಅಸಂಬದ್ಧ ಹೇಳಿಕೆಗಳನ್ನು ಪುನರಾವರ್ತಿಸುವುದರಿಂದ ಅವರ ಸುಳ್ಳು ಮತ್ತು ಬೂಟಾಟಿಕೆಯನ್ನು ಸಮರ್ಥಿಸಲಾಗುವುದಿಲ್ಲ. ಅಥವಾ ಗಡಿಯಾಚೆಗಿನ ಭಯೋತ್ಪಾದನೆಯ ದುಷ್ಟ ಕೃತ್ಯವನ್ನು ಸಮರ್ಥಿಸಲಾಗುವುದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಹಮಾಸ್ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ
ಪಾಕಿಸ್ತಾನದ ಮೂಲಭೂತವಾದಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇದಲ್ಲದೆ, ಅವರ ಉಗ್ರವಾದದ ದಾಖಲೆಯು ಇಡೀ ಪ್ರಪಂಚದ ಮುಂದೆ ಇದೆ. ಇಂತಹ ಪ್ರಯತ್ನಗಳು ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ. ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ.