CricketLatestLeading NewsMain PostSports

ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಹರ್ಭಜನ್ ಸಿಂಗ್

ಮುಂಬೈ: ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹರ್ಭಜನ್ ಸಿಂಗ್, ಕ್ರಿಕೆಟ್ ವೃತ್ತಿಜೀವನದ ಎಲ್ಲಾ ಸುಂದರ ಕ್ಷಣಗಳೊಂದಿಗೆ ಇಂದು ಎಲ್ಲಾ ಮಾದರಿ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನನ್ನ 23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದುದ್ದಕ್ಕೂ ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ಬಿಜೆಪಿ ಸೇರುವುದು Fake News: ಹರ್ಭಜನ್ ಸಿಂಗ್

23 ವರ್ಷಗಳ ಕಾಲ ಭಾರತೀಯ ಕ್ರಿಕೆಟ್‍ಗೆ ಸೇವೆ ಸಲ್ಲಿಸಿದ ಹರ್ಭಜನ್ 2001ರಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದರು. ಇದು ಅವರ ವೃತ್ತಿ ಜೀವನದ ಶ್ರೇಷ್ಠ ಸಾಧನೆಯಾಗಿದೆ. 2007ರ ಟಿ20 ವಿಶ್ವಕಪ್ ಮತ್ತು 2011ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಜಯಿಸಿದ ಭಾರತ ತಂಡದ ಸದಸ್ಯರಾಗಿದ್ದ ಹರ್ಭಜನ್ ಟೀಂ ಇಂಡಿಯಾ ವಿಶ್ವಕಪ್ ಜಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದನ್ನೂ ಓದಿ: ಬಾರ್ಡರ್ – ಗವಾಸ್ಕರ್ ಟೂರ್ನಿಯ ಟಾಪ್ 5 ಕ್ಯಾಚ್ – ವಿಡಿಯೋ

ಟೀಂ ಇಂಡಿಯಾ ಪರ ಕೊನೆಯದಾಗಿ 2016ರಲ್ಲಿ ಆಡಿದ್ದ ಹರ್ಭಜನ್, 103 ಟೆಸ್ಟ್ ಪಂದ್ಯಗಳಿಂದ 417 ವಿಕೆಟ್ ಪಡೆದಿದ್ದು, ಈ ಮೂಲಕ ಅತಿ ಹೆಚ್ಚು ವಿಕೆಟ್ ಕಿತ್ತ ಭಾರತದ ಬೌಲರ್‌ಗಳ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. 236 ಏಕದಿನ ಪಂದ್ಯದಿಂದ 269 ವಿಕೆಟ್ ಮತ್ತು 28 ಟಿ20 ಪಂದ್ಯಗಳಿಂದ 25 ವಿಕೆಟ್ ಪಡೆದಿದ್ದಾರೆ. ಐಪಿಎಲ್‍ನಲ್ಲೂ ಕೂಡ 13 ಸೀಸನ್‍ಗಳಲ್ಲಿ ವಿವಿಧ ತಂಡಗಳನ್ನು ಪ್ರತಿನಿಧಿಸಿರುವ ಹರ್ಭಜನ್, 163 ಪಂದ್ಯಗಳಿಂದ 150 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಫೆ.12,13 ರಂದು ಐಪಿಎಲ್ ಮೆಗಾ ಹರಾಜು?

Leave a Reply

Your email address will not be published.

Back to top button