ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (Line Of Control) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ. ಕಾಶ್ಮೀರದ ಬಾಲ್ಕೋಟ್ ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದೆ. ಆದ್ರೆ ಈ ಬಗ್ಗೆ ಇದೂವರೆಗೂ ಅಧಿಕೃತ ಮಾಹಿತಿ ಹೊರಬಂದಿಲ್ಲ.
Advertisement
Srinagar: Visuals from outside the residence of JKLF chief Yasin Malik where NIA is conducting a raid. #JammuAndKashmir pic.twitter.com/Ui3oIJKiI3
— ANI (@ANI) February 26, 2019
Advertisement
ಮಿರಾಜ್- 2000 ಹೆಸರಿನ 12 ಜೆಟ್ ಗಳನ್ನು ಬಳಸಿ ಇಂದು ಬೆಳಗ್ಗಿನ ಜಾವ 3.30ಕ್ಕೆ ವೈಮಾನಿಕ ದಾಳಿ ನಡೆದಿದ್ದು, ಕೆಲವು ದೃಶ್ಯಗಳು ಮತ್ತು ಫೋಟೋಗಳನ್ನು ರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುತ್ತಿವೆ. ಭಾರತೀಯ ಸೇನೆಯ ಯುದ್ಧ ವಿಮಾನಗಳು ಎಲ್‍ಓಸಿ ಗಡಿಯನ್ನು ದಾಟಿ ಪಾಕಿಸ್ತಾನದತ್ತ ಬರುತ್ತಿವೆ ಎಂದು ಪಾಕ್ ಹೇಳಿತ್ತು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv