ನವದೆಹಲಿ: ಅಘ್ಘಾನಿಸ್ತಾನದಲ್ಲಿ ದಾಳಿ ನಡೆಸಿರುವ ಐಸಿಸ್-ಕೆ ಉಗ್ರರ ಸಂಘಟನೆ ವಿರುದ್ಧ ಭಾರತ ಕಿಡಿಕಾರಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದೆ.
Advertisement
ಅಘ್ಘಾನಿಸ್ತಾನದ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಭೀಕರ ಭಯೋತ್ಪಾದಕ ದಾಳಿಗೆ ಭಾರತ ಖಂಡನೆ ಸೂಚಿಸಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು. ಉಗ್ರರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ವಿದೇಶಾಂಗ ಸಚಿವಾಲಯದಿಂದ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ
Advertisement
India strongly condemns the bomb blasts in Kabul. We extend our heartfelt condolences to the families of victims of this terrorist attack. Today’s attacks reinforce the need for the world to stand unitedly against terrorism & all those who provide sanctuaries to terrorists: MEA pic.twitter.com/PsDFOa7wuN
— ANI (@ANI) August 26, 2021
Advertisement
ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಸರ್ವಪಕ್ಷ ಸಭೆ ಕರೆದು ಮಾತನಾಡಿದ್ದು, ಅಘ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಸ್ಥಿತಿಗತಿಗಳನ್ನು ಭಾರತ ಗಮನಿಸುತ್ತಿದೆ. ಅಘ್ಘಾನಿಸ್ತಾನದಲ್ಲಿ ತಾಲಿಬಾನಿಗಳು ನಡೆಸುತ್ತಿರುವ ದಬ್ಬಾಳಿಕೆ ಗಮನಿಸುತ್ತಿದ್ದು, ಕಾಬೂಲ್‍ನಲ್ಲಿ ಹಲವು ಘಟನೆಗಳು ಸಂಭವಿಸುತ್ತಿದೆ. ಅಲ್ಲಿನ ಜನ ದೇಶ ಬಿಟ್ಟು ತೆರಳಲು ಕಾತರರಾಗಿದ್ದಾರೆ. ಭಾರತ, ಅಮೆರಿಕ ಸಹಿತ ಇತರ ದೇಶ ಕಾಬೂಲ್‍ನಲ್ಲಿ ಐಸಿಸ್ ಸಂಘಟನೆಯ ದಾಳಿಯನ್ನು ಖಂಡಿಸಿದೆ ಮತ್ತು ಎಚ್ಚರಿಕೆ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು
Advertisement