ನವದೆಹಲಿ: ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಭಾರತ ಅಮಾನತುಗೊಳಿಸಿದೆ ಎಂದು ಜಾಗತಿಕ ವಿಮಾನಯಾನ ಸಂಸ್ಥೆಯ ಇಂಟರ್‌ನ್ಯಾಶನಲ್ ಏರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (IATA) ತಿಳಿಸಿದೆ.
ಚೀನಾದ ವಿಶ್ವವಿದ್ಯಾನಿಲಯಗಳಲ್ಲಿ ದಾಖಲಾದ ಸುಮಾರು 22,000 ಭಾರತೀಯ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಿಂತಿರುಗಲು ಸಾಧ್ಯವಾಗದ ಬಗ್ಗೆ ಭಾರತದ ಮನವಿಗಳಿಗೆ ಬೀಜಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೆರೆಯ ದೇಶವು ಇಲ್ಲಿಯವರೆಗೆ ಅವರನ್ನು ಪ್ರವೇಶಿಸಲು ನಿರಾಕರಿಸಿದೆ. 2020 ರ ಆರಂಭದಲ್ಲಿ ಕೊರೊನಾ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗ ಈ ವಿದ್ಯಾರ್ಥಿಗಳು ಚೀನಾದಲ್ಲಿ ತಮ್ಮ ಅಧ್ಯಯನ ತೊರೆದು ಭಾರತಕ್ಕೆ ಬಂದಿದ್ದರು. ಇದನ್ನೂ ಓದಿ: ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ
Advertisement
Advertisement
ಭಾರತಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಸುತ್ತೋಲೆಯಲ್ಲಿ, ಚೀನಾ ಪ್ರಜೆಗಳಿಗೆ ನೀಡಲಾದ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಐಎಟಿಎ ಹೇಳಿದೆ. ಭೂತಾನ್, ಮಾಲ್ಡೀವ್ಸ್, ನೇಪಾಲ್ ಪ್ರಜೆಗಳು ಭಾರತಕ್ಕೆ ಪ್ರವಾಸ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.
Advertisement
ಭಾರತ ನೀಡಿದ ನಿವಾಸ ಪರವಾನಿಗೆ ಹೊಂದಿರುವ ಪ್ರಯಾಣಿಕರು, ಭಾರತದಿಂದ ನೀಡಿದ ವೀಸಾ ಅಥವಾ ಇ-ವೀಸಾ ಹೊಂದಿರುವ ಪ್ರಯಾಣಿಕರು, ಭಾರತದ ಸಾಗರೋತ್ತರ ನಾಗರಿಕ (OCI) ಕಾರ್ಡ್ ಅಥವಾ ಬುಕ್ಲೆಟ್ ಹೊಂದಿರುವ ಪ್ರಯಾಣಿಕರು, ಭಾರತೀಯ ಮೂಲದ ವ್ಯಕ್ತಿಗಳು (PIO) ಕಾರ್ಡ್ ಹೊಂದಿರುವ ಪ್ರಯಾಣಿಕರು, ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಅನುಮತಿ ಇದೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ
Advertisement
10 ವರ್ಷಗಳ ಮಾನ್ಯತೆ ಹೊಂದಿರುವ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಐಎಟಿಎ ಹೇಳಿದೆ.