ನವದೆಹಲಿ: ಉತ್ಪಾದನೆ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿತ್ತು. ಆದರೆ ನಿಷೇಧ ಹೇರುವುದಕ್ಕೂ ಮುನ್ನವೇ ಕಸ್ಟಮ್ಸ್ ಪ್ರಾಧಿಕಾರದಲ್ಲಿ ನೋಂದಾಯಿಸಲಾದ ನಿಗದಿತ ಪ್ರಮಾಣದ ಗೋಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮೇ 13ಕ್ಕೂ ಮುನ್ನವೇ ಕಸ್ಟಮ್ಸ್ ವ್ಯವಸ್ಥೆಗಳಲ್ಲಿ ನೋಂದಾಯಿಸಲಾಗಿದ್ದು, ಅಂತಹ ಸರಕುಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ
ಜೊತೆಗೆ ಗೋಧಿ ರಫ್ತು ಮಾಡಲು ತೊಡಗಿರುವ ಮೇರಾ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ.ಲಿ. ಈಜಪ್ಟ್ 61,500 ಮೆಟ್ರಿಕ್ ಟನ್ ಲೋಡ್ ಗೋಧಿ ರಫ್ತಿಗೆ ಅನುಮತಿ ನೀಡಿದೆ. ಅದರಲ್ಲಿ 44,340 ಮೆಟ್ರಿಕ್ ಟನ್ ಈಗಾಗಲೇ ಲೋಡ್ ಮಾಡಲಾಗಿದೆ. ಇನ್ನು 17,160 ಮೆಟ್ರಿಕ್ ಟನ್ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಗೋಧಿಯನ್ನು ಸರಬರಾಜು ಮಾಡಲು ನಿರ್ಧರಿಸಿದೆ ಎಂದು ಹೇಳಿದೆ.
ರಫ್ತಿಗೆ ನಿಷೇಧ ಹೇರಿದ್ದು ಏಕೆ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ
ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.