ಮುಂಬೈ: ಭಾರೀ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ (Champions Trophy 2025) ಇದೇ ಜನವರಿ 12ರ ಒಳಗೆ ಭಾರತ ತಂಡ (Team India) ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
Advertisement
ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ ಐಸಿಸಿ (ICC), ಜನವರಿ 12ರ ಒಳಗೆ ತಾತ್ಕಾಲಿಕ ತಂಡಗಳನ್ನು ಪ್ರಕಟಿಸಲು ಗಡುವು ನೀಡಿದೆ. ಆ ಬಳಿಕ ಸ್ಕ್ವಾಡ್‌ನಲ್ಲಿ ಬದಲಾವಣೆ ತರಲು ಫೆ.13ರ ವರೆಗೆ ಅವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸ್ಕ್ವಾಡ್‌ಗೆ ಆಯ್ಕೆಯಾದವರು ಫಾರ್ಮ್‌ಗೆ ಹೊಂದಿಕೊಳ್ಳದಿದ್ದರೆ, ಅಭ್ಯಾಸದ ವೇಳೆ ಗಾಯದ ಸಮಸ್ಯೆಗೆ ತುತ್ತಾದರೆ, ಲೈನ್ ಅಪ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಳ್ಳುವುದಕ್ಕೆ ಫೆ.13ರ ವರೆಗೆ ಅವಕಾಶ ಇರಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಜ.12ರ ಒಳಗೆ ಭಾರತ ತಂಡವನ್ನು ಪ್ರಕಟಿಸಲಿದೆ.
Advertisement
Advertisement
ಅಲ್ಲದೇ ಇದೇ ಜನವರಿ 22ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಜನವರಿ 11ರ ಒಳಗೆ ಭಾರತ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ 2025 ರ ವೇಳಾಪಟ್ಟಿ ಪ್ರಕಟ; ಫೆ.23ರ ಭಾನುವಾರ ಭಾರತ-ಪಾಕ್ ಮುಖಾಮುಖಿ
Advertisement
ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತವು ಫೆಬ್ರವರಿ 20 ರಂದು ಬಾಂಗ್ಲಾದೇಶ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ ಬಾರಿ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
8 ಸ್ಪರ್ಧಾತ್ಮಕ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ ತಂಡಗಳಿವೆ. ಬಿ-ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್ ಸೇರಿವೆ. ಇದನ್ನೂ ಓದಿ: 4 ರನ್ ಗಳಿಸಿ ವೈಭವ್ ವಿಶೇಷ ಸಾಧನೆ – 13ರ ಬಾಲಕನಿಗೆ ಹಿರಿಯ ಕ್ರಿಕೆಟಿಗರಿಂದ ಮೆಚ್ಚುಗೆ