ನವದೆಹಲಿ: 2020ರ ವೇಳೆಗೆ ದೇಶದಲ್ಲಿ 5ಜಿ ತಂತ್ರಜ್ಞಾನ ಸೇವೆ ಆರಂಭಗೊಳ್ಳಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಸಮಿತಿ ರಚಿಸಿದೆ.
3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ನಾವು ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿದ್ದೇವು. ಆದರೆ ವಿಶ್ವದಲ್ಲಿ 5ಜಿ ಮಾನದಂಡ ಸಿದ್ಧತೆ ಮಾಡುವ ಸಂದರ್ಭದಲ್ಲಿ ಭಾರತವೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತದೆ. ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಕೈತಪ್ಪಲು ಬಿಡುವುದಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ.
Advertisement
500 ಕೋಟಿ ಮೂಲನಿಧಿಯೊಂದಿಗೆ 5ಜಿ ಸಂಬಂಧಿತ ಸಂಶೋಧನೆ ಹಾಗೂ ಅಭಿವೃದ್ಧಿ ನಡೆಯಲಿದ್ದು, ಈ ಸಮಿತಿಯಲ್ಲಿ ಟೆಲಿಕಾಂ, ಮಾಹಿತಿ ತಂತ್ರಜ್ಞಾನ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಇರಲಿದ್ದಾರೆ.
Advertisement
5ಜಿ ಬಂದರೆ ನಗರ ಪ್ರದೇಶದಲ್ಲಿ 10 ಗಿಗಾ ಬೈಟ್ಸ್ ಪರ್ ಸೆಕೆಂಡ್ ಬ್ರಾಡ್‍ಬ್ಯಾಂಡ್ ಸಂಪರ್ಕ ಸಿಕ್ಕಿದರೆ, ಗ್ರಾಮಾಂತರ ಪ್ರದೇಶದಲ್ಲಿ 1 ಗಿಗಾ ಬೈಟ್ಸ್ ಪರ್ ಸೆಕೆಂಡ್ ಸಿಗಲಿದೆ.
Advertisement
ಕೆಲ ದಿನಗಳ ಹಿಂದೆ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) 5ಜಿ ಸೇವೆಗೆ 3300- 3400 Mhz ಮತ್ತು 3400- 3600 Mhz ಬ್ಯಾಂಡ್ ಬಳಸಲು ಸಮಯ ನಿಗದಿ ಪಡಿಸಿ ಎಂದು ಟೆಲಿಕಾಂ ಕಂಪೆನಿಗಳಿಗೆ ಹೇಳಿತ್ತು. ಕೇಂದ್ರ ಸರ್ಕಾರ 5ಜಿ ಸೇವೆ ಆರಂಭಿಸಲು ಉತ್ಸುಕವಾಗಿದ್ದರೂ ಭಾರತೀಯ ಟೆಲಿಕಾಂ ಕಂಪೆನಿ ಹಣಕಾಸು ಸಮಸ್ಯೆ ಎದುರಿಸುತ್ತಿರುವ ಕಾರಣ 2021-2022ರ ವೇಳೆಗೆ 5ಜಿ ಭಾರತದಲ್ಲಿ ಆರಂಭವಾಗಬಹುದು ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.
Advertisement
ಇಂಟರ್‍ನ್ಯಾಷನಲ್ ಟೆಲಿಕಮ್ಯೂನಿಕೇಷನ್ ಯುನಿಯನ್(ಐಟಿಯು) 5ಜಿ ಮಾನದಂಡವನ್ನು ಸಿದ್ಧಪಡಿಸಲಿದ್ದು, ಈಗಾಗಲೇ ಪ್ರಸ್ತಾವನೆ ಸಿದ್ದಪಡಿಸಿದೆ. ಫೆಬ್ರವರಿಯಲ್ಲಿ ಪ್ರಸ್ತಾಪಗೊಂಡ ಪ್ರಕಾರ 5ಜಿ ಡೌನ್‍ಲಿಂಕ್ ಸ್ಪೀಡ್ 20 ಗಿಗಾಬೈಟ್ಸ್ ಪರ್ ಸೆಕೆಂಡ್ ಇರಬೇಕೆಂದು ಹೇಳಿದೆ.