ಢಾಕಾ: ರಿಷಭ್ ಪಂತ್ (Rishabh Pant), ಶ್ರೇಯಸ್ ಅಯ್ಯರ್ (Shreyas Iyer) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 2ನೇ ಟೆಸ್ಟ್‌ನ ಎರಡನೇ ದಿನದ ಅಂತ್ಯಕ್ಕೆ 80 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.
ಬಾಂಗ್ಲಾದೇಶದ (Bangladesh) ವಿರುದ್ಧ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಜಯ ಸಾಧಿಸಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಭಾರತ (Team India), 2ನೇ ಟೆಸ್ಟ್‌ನಲ್ಲೂ ಬ್ಯಾಟಿಂಗ್, ಬೌಲಿಂಗ್ ಅಬ್ಬರ ಮುಂದುವರಿಸಿದೆ. 2ನೇ ದಿನದಾಟದಲ್ಲಿ 80 ರನ್‌ಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: 227 ರನ್‍ಗೆ ಬಾಂಗ್ಲಾ ಆಲೌಟ್ – ಡೆಬ್ಯೂ ಪಂದ್ಯವಾಡಿ 12 ವರ್ಷಗಳ ಬಳಿಕ ಮೊದಲ ವಿಕೆಟ್ ಪಡೆದ ಉನಾದ್ಕಟ್
Advertisement
Advertisement
2ನೇ ಟೆಸ್ಟ್ ಮೊದಲ ದಿನ 73.5 ಓವರ್‌ಗಳಲ್ಲಿ ಭಾರತ 227 ರನ್‌ಗಳಿಗೆ ಬಾಂಗ್ಲಾದೇಶ (Bangladesh) ತಂಡವನ್ನು ಕಟ್ಟಿಹಾಕಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಭಾರತ 8 ಓವರ್‌ಗಳಲ್ಲಿ 19 ರನ್ ಬಾರಿಸಿ ಯಾವುದೇ ವಿಕೆಟ್ ನಷ್ಟವಿಲ್ಲದೇ 208 ರನ್‌ಗಳ ಹಿನ್ನಡೆ ಕಾಯ್ದುಕೊಂಡಿತ್ತು.
Advertisement
Advertisement
ಇಂದು ಮತ್ತೆ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಎರಡನೇ ದಿನದ ಅಂತ್ಯಕ್ಕೆ 56.3 ಓವರ್‌ಗಳಲ್ಲಿ 314 ರನ್ ಗಳಿಸಿತು. ನಂತರ ಕ್ರೀಸ್‌ಗಿಳಿದ ಬಾಂಗ್ಲಾದೇಶ 6 ಓವರ್‌ಗಳಲ್ಲಿ 7 ರನ್‌ಗಳಿಸಿ, 8 ರನ್‌ಗಳ ಹಿನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: ರನ್ ಓಡಲು ಪಂತ್ ನಿರಾಕರಣೆ – ಗುರಾಯಿಸಿದ ಕೊಹ್ಲಿ
2ನೇ ದಿನದ ಇನ್ನಿಂಗ್ಸ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್.ರಾಹುಲ್ (KL Rahul) ಹಾಗೂ ಶುಭಮನ್ ಗಿಲ್ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ರಾಹುಲ್ 45 ಎಸೆತಗಳಲ್ಲಿ ಕೇವಲ 10 ರನ್ ಗಳಿಸಿದರೆ, ಗಿಲ್ 39 ಎಸೆತಗಳಲ್ಲಿ 20 ರನ್ ಗಳಿಸಿದರು. ನಂತರದಲ್ಲಿ ಚೇತೇಶ್ವರ್ ಪೂಜಾರ (55 ಎಸೆತ) ಹಾಗೂ ವಿರಾಟ್ ಕೊಹ್ಲಿ (Virat Kohli) (73 ಎಸೆತ) ತಲಾ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಈ ವೇಳೆ ಸತತ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಆಸರೆಯಾದರು. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಬ್ಬರು ಆಟಗಾರರು ಸಿಕ್ಸರ್, ಬೌಂಡರಿ ಬಾರಿಸುವ ಜೊತೆಗೆ ಉತ್ತಮ ಇನ್ನಿಂಗ್ಸ್ ಕಟ್ಟಿದರು.
104 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 94 ರನ್ (7 ಬೌಂಡರಿ, 5 ಸಿಕ್ಸರ್) ಚಚ್ಚಿ ಶತಕ ವಂಚಿತರಾದರೆ, 105 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 87 ರನ್ (10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು.
ನಂತರದಲ್ಲಿ ಕಣಕ್ಕಿಳಿದ ಅಕ್ಷರ್ ಪಟೇಲ್ 4 ರನ್, ಆರ್.ಅಶ್ವಿನ್ 12 ರನ್, ಉಮೇಶ್ ಯಾದವ್ 14 ರನ್, ಮೊಹಮ್ಮದ್ ಸಿರಾಜ್ 7 ರನ್ ಗಳಿಸಿದರೆ, ಜಯದೇವ್ ಉನಾದ್ಕಟ್ 14 ರನ್ ಗಳಿಸಿ ಅಜೇಯರಾಗುಳಿದರು.