ಮುಂಬೈ: ದಕ್ಷಿಣ ಆಫ್ರಿಕಾ (South Africa) ಪ್ರವಾಸ ಕೈಗೊಳ್ಳಲಿರುವ ಭಾರತ (India) ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ.
ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಏಕದಿನಕ್ಕೆ ಕೆಎಲ್ ರಾಹುಲ್, ಟಿ20ಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್ 10ರಿಂದ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.
Advertisement
ಏಕದಿನ ಮತ್ತು ಟಿ20 ಪಂದ್ಯಗಳಿಂದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ವಿಶ್ರಾಂತಿ ಬೇಕೆಂದು ಮಾಡಿದ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದೆ. ಆದರೆ ಟೆಸ್ಟ್ ಸರಣಿ ವೇಳೆ ಇವರಿಬ್ಬರು ತಂಡವನ್ನು ಸೇರಲಿದ್ದಾರೆ.
Advertisement
Advertisement
ಮೊಹಮ್ಮದ್ ಶಮಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ. ಸಂಜು ಸ್ಯಾಮ್ಸನ್ ಅವರು ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಬೌಲರ್‌ಗಳಿಗೆ ಶಾಕ್ ಕೊಟ್ಟ ಐಸಿಸಿ – ನಿಗದಿತ ಸಮಯದಲ್ಲಿ ಓವರ್ ಆರಂಭಿಸದಿದ್ದರೆ ಬೀಳುತ್ತೆ ದಂಡ
Advertisement
ಡಿ.10, 12, 14 ರಂದು ಟಿ20 ಪಂದ್ಯ ನಡೆದರೆ ಡಿ.17,19,21 ರಂದು ಏಕದಿನ ಪಂದ್ಯ ನಡೆಯಲಿದೆ. ಡಿಸೆಂಬರ್ 26 ರಿಂದ 30ರವರೆಗೆ ಮೊದಲ ಟೆಸ್ಟ್, ಜನವರಿ 3 ರಿಂದ 7ರವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.
ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ಕೆಎಲ್ ರಾಹುಲ್ (ವಿಕೆಟ್‌ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಏಕದಿನ ತಂಡ:
ಕೆಎಲ್ ರಾಹುಲ್ (ನಾಯಕ/ ವಿಕೆಟ್‌ಕೀಪರ್), ಋತುರಾಜ್ ಗಾಯಕ್ವಾಡ್, ಸಾಯ್ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಹರ್.
ಟಿ20 ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.