ಲಾಡರ್ಹಿಲ್: ಯುವತಾರೆ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ಶುಭಮನ್ ಗಿಲ್ (Shubman Gill) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ (West Indies) ವಿರುದ್ಧ ಟಿ20 ಸರಣಿಯ 4ನೇ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-2 ಅಂತರದಲ್ಲಿ ಸಮಬಲ ಸಾಧಿಸಿದೆ. ಇಂದು (ಆ.13) ಲಾಡರ್ಹಿಲ್‌ನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಕ್ರೀಡಾಂಗಣದಲ್ಲಿ ನಿರ್ಣಾಯಕ ಪಂದ್ಯ ನಡೆಯಲಿದ್ದು, ರಾತ್ರಿ 8ಕ್ಕೆ ಪಂದ್ಯ ಆರಂಭವಾಗಲಿದೆ.
Advertisement
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಭಾರತ (Team India) 17 ಓವರ್‌ಗಳಲ್ಲೇ ಕೇವಲ 1 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ಆರಂಭದಿಂದಲೇ ವಿಂಡೀಸ್ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 94 ಎಸೆತಗಳಲ್ಲಿ 165 ರನ್ ಕಲೆಹಾಕಿತ್ತು.
Advertisement
ಶುಭಮನ್ ಗಿಲ್ 47 ಎಸೆತಗಳಲ್ಲಿ 77 ರನ್ (3 ಬೌಂಡರಿ, 5 ಸಿಕ್ಸರ್) ಗಳಿಸಿ ಔಟಾದರು. ಆದ್ರೆ ಕೊನೆಯವರೆಗೂ ಅಬ್ಬರಿಸಿದ ಯಶಸ್ವಿ 51 ಎಸೆತಗಳಲ್ಲಿ 84 ರನ್ (3 ಸಿಕ್ಸರ್, 11 ಬೌಂಡರಿ) ಚಚ್ಚಿ ಅಜೇಯರಾಗುಳಿದರು. ಕೊನೆಯಲ್ಲಿ ತಿಲಕ್ ವರ್ಮಾ 7 ರನ್ ಗಳಿಸಿದರು. ಇದನ್ನೂ ಓದಿ: Asian Championship Trophy Hockey final: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ; ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ
Advertisement
Advertisement
ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಪರ ಶಿಮ್ರಾನ್ ಹೆಟ್ಮೇಯರ್ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. 156.41 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಹೆಟ್ಮೇಯರ್ 39 ಎಸೆತಗಳಲ್ಲಿ 61 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿದರು. ಇದರೊಂದಿಗೆ ಶಾಯ್ ಹೋಪ್ 29 ಎಸೆತಗಳಲ್ಲಿ 45 ರನ್ (2 ಸಿಕ್ಸರ್, 3 ಬೌಂಡರಿಗಳ ಕೊಡುಗೆ ನೀಡಿದರು. ಅಂತಿಮವಾಗಿ ವಿಂಡೀಸ್ 178 ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಕಳಪೆ ಬೌಲಿಂಗ್‌ನಿಂದಾಗಿ ಹೀನಾಯ ಸೋಲು ಅನುಭವಿಸಿತು. ಇದನ್ನೂ ಓದಿ: ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ
ಟೀಂ ಇಂಡಿಯಾ ಪರ ಅರ್ಷ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ 38 ರನ್ ನೀಡಿ 3 ವಿಕೆಟ್, ಕುಲ್‌ದೀಪ್ ಯಾದವ್ 2 ವಿಕೆಟ್ ಕಿತ್ತರೆ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು. ವಿಂಡೀಸ್ ಪರ ರೊಮಾರಿಯೋ ಶೆಫರ್ಡ್ ಒಂದೇ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
Web Stories