ಡೊಮಿನಿಕಾ: ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 3ನೇ ದಿನದಾಟಕ್ಕೆ 5 ವಿಕೆಟ್ ನಷ್ಟಕ್ಕೆ 421 ರನ್ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ (West Indies) ಟೆಸ್ಟ್ ಸರಣಿಯ 3ನೇ ದಿನದಾಟದಲ್ಲಿ ಭಾರತ (Team India) ಬೃಹತ್ ಮೊತ್ತ ದಾಖಲಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿದ್ದ ಭಾರತ ಡಿಕ್ಲೇರ್ ಮಾಡಿಕೊಂಡಿದ್ದು, 271 ರನ್‌ಗಳ ಮುನ್ನಡೆ ಸಾಧಿಸಿದೆ.
Advertisement
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆಗಿದ್ದ ವೆಸ್ಟ್ ಇಂಡೀಸ್ 3ನೇ ದಿನ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿದೆ. 3ನೇ ದಿನ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಜೋಡಿ ಉತ್ತಮ ರನ್ ಕಲೆಹಾಕಿತ್ತು. ಮೊದಲ ಎರಡು ದಿನಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್ 3ನೇ ದಿನದಾಟದಲ್ಲಿ 387 ಎಸೆತಗಳಲ್ಲಿ 171 ರನ್ (16 ಬೌಂಡರಿ, 1 ಸಿಕ್ಸರ್) ಗಳಿಸಿ ಔಟಾದರು. ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಹಲವು ದಾಖಲೆ ಮುರಿದ ಯಶಸ್ವಿ ಜೈಸ್ವಾಲ್
Advertisement
Advertisement
ನಂತರ ಕ್ರೀಸ್‌ಗಿಳಿಸಿ ಉಪನಾಯಕ ಅಜಿಂಕ್ಯಾ ರಹಾನೆ ಕೇವಲ 3 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ 76 ರನ್ (182 ಎಸೆತ, 5 ಬೌಂಡರಿ) ಗಳಿಸಿದ್ದ ವಿರಾಟ್ ಕೊಹ್ಲಿ ಸಹ ವಿಕೆಟ್ ಕೈಚೆಲ್ಲಿದರು. ರವೀಂದ್ರ ಜಡೇಜಾ 37 ರನ್ (82 ಎಸತೆ, 3 ಬೌಂಡರಿ, 1 ಸಿಕ್ಸರ್) ಹಾಗೂ ಇಶಾನ್ ಕಿಶನ್ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾಗ ಟೀಂ ಇಂಡಿಯಾ ಡಿಕ್ಲೇರ್ ಮಾಡಿಕೊಂಡಿತು. ಇದನ್ನೂ ಓದಿ: IND vs WI: ಅಪ್ಪ, ಮಗನನ್ನು ಔಟ್ ಮಾಡಿ ದಾಖಲೆ ಬರೆದ ಅಶ್ವಿನ್
Advertisement
ಟೆಸ್ಟ್ ಸರಣಿ ಆರಂಭದ ಮೊದಲ ದಿನವೇ 150ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡ ವೆಸ್ಟ್ ಇಂಡೀಸ್ ತಂಡ ಬೌಲಿಂಗ್‌ನಲ್ಲೂ ಕಳಪೆ ಪ್ರದರ್ಶನ ನೀಡಿತು. ತವರು ನೆಲದಲ್ಲಿ ಟೀಂ ಇಂಡಿಯಾ ಆಟಗಾರರ ವಿಕೆಟ್ ಕಬಳಿಸಲು ಹೆಣಗಾಡುತ್ತಿತ್ತು. ಆದ್ರೆ ಟೀಂ ಇಂಡಿಯಾ ಬೃಹತ್ ಮೊತ್ತ ದಾಖಲಿಸಿದ್ದರಿಂದ 421 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು.
ಇನ್ನೂ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಅದ್ಭುತ ಆರಂಭ ನೀಡಿದ್ದರು. 454 ಎಸೆತಗಳಲ್ಲಿ ಈ ಜೋಡಿ 229 ರನ್ ಕಲೆಹಾಕಿತ್ತು. ರೋಹಿತ್ ಶರ್ಮಾ 221 ಎಸತೆಗಳಲ್ಲಿ 103 ರನ್ ಗಳಿಸಿದರೆ, ರೋಹಿತ್ ಔಟಾದ ಬಳಿಕವೂ ಬ್ಯಾಟಿಂಗ್ ಮುಂದುವರಿಸಿದ ಜೈಸ್ವಾಲ್ 171 ರನ್ ಪೇರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ 6 ರನ್ ಗಳಿಗೆ ಔಟಾಗಿ ನಿರಾಸೆ ಅನುಭವಿಸಿದರು.
Web Stories