ಟ್ರೆನಿನಾಡ್: ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಬ್ಬರ ಹಾಗೂ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಬಲದಿಂದ ಭಾರತ ತಂಡ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು 7 ವಿಕೆಟ್ ಭರ್ಜರಿ ಸಾಧಿಸಿದೆ.
ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಭಾರತಕ್ಕೆ 165 ರನ್‌ಗಳ ಗುರಿ ನೀಡಿತು. ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲೇ 3 ವಿಕೆಟ್ ನಷ್ಟಕ್ಕೆ 165 ರನ್‌ಗಳಿಸಿ ಮುನ್ನಡೆ ಸಾಧಿಸಿತು. ರೋಹಿತ್ ಶರ್ಮಾ ಬಳಗ ಈ ಗೆಲುವಿನ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.
Advertisement
https://twitter.com/Abdullah__Neaz/status/1554541514750959616
Advertisement
165 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಅವರು ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿ 11 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು
Advertisement
ಈ ವೇಳೆ ಮತ್ತೊಬ್ಬ ಆರಂಭಿಕನಾಗಿದ್ದ ಸೂರ್ಯಕುಮಾರ್ ಯಾದವ್‌ಗೆ 2ನೇ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಸಾಥ್ ನೀಡಿದರು. ಸೂರ್ಯಕುಮಾರ್ ಮತ್ತು ಶ್ರೇಯಸ್ ಅಯ್ಯರ್ 86 ರನ್ ಜೊತೆಯಾಟ ಆಡಿದರು.
Advertisement
ವಿಂಡೀಸ್ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಸೂರ್ಯಕುಮಾರ್ 8 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದರು. ಡೊಮಿನಿಕ್ ಡ್ರೇಕ್ಸ್ ಎಸೆತದಲ್ಲಿ ಔಟಾಗುವ ಮುನ್ನ ಅವರು ತಂಡವನ್ನು ಉತ್ತಮ ಸ್ಥಿತಿಗೆ ತಂದು ನಿಲ್ಲಿಸಿದ್ದರು. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ
ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ಆಸರೆಯಾದ ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ ಅಜೇಯ 33 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ದೀಪಕ್ ಹೂಡಾ ಅಜೇಯ 10 ಹಾಗೂ ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ಟೀಂ ಇಂಡಿಯಾ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಉರುಳಿಸಿದರು. ಹಾರ್ದಿಕ್ ಪಾಂಡ್ಯ, ಅರ್ಶ್ದೀಪ್ ಸಿಂಗ್ ತಲಾ ಒದೊಂದು ವಿಕೆಟ್ ಪಡೆದರು.
ಮೇಯರ್ಸ್ ಆಸರೆ: ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ಕೈಲ್ ಮೇಯರ್ಸ್ ಅವರ ಅರ್ಧಶತಕದ ನೆರವಿನಿಂದ ಉತ್ತಮ ಮೊತ್ತ ಕಲೆಹಾಕಿತ್ತು. 50 ಎಸೆತಗಳನ್ನು ಎದುರಿಸಿದ ಮೇಯರ್ಸ್ 8 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 73 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಬ್ರೆಂಡನ್ ಕಿಂಗ್ 20 ರನ್, ನಾಯಕ ನಿಕೊಲಸ್ ಪೂರನ್ 22 ರನ್ ಸೇರಿಸಿ ತಂಡಕ್ಕೆ ಆಸರೆಯಾದರು.
ಒಟ್ಟಿನಲ್ಲಿ ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ವೆಸ್ಟ್ ಇಂಡೀಸ್ ಬೌಲರ್‌ಗಳು ವಿಫಲವಾದ್ದರಿಂದ ಗೆಲುವು ಟೀಂ ಇಂಡಿಯಾ ಪಾಲಾಯಿತು.