ಡೊಮಿನಿಕಾ: ಯಶಸ್ವಿ ಜೈಸ್ವಾಲ್ (Yashasvi Jaiswal, ರೋಹಿತ್ ಶರ್ಮಾ (Rohit Sharma) ಶತಕದ ಬ್ಯಾಟಿಂಗ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ಮೋಡಿ ನೆರವಿನಿಂದ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 141 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟೀಂ ಇಂಡಿಯಾ ಪರ ಮೊದಲ ಟೆಸ್ಟ್ ಮ್ಯಾಚ್‌ನಲ್ಲೇ 12 ವಿಕೆಟ್ ಉಡೀಸ್ ಮಾಡಿರುವ ಅಶ್ವಿನ್ (Ravichandran Ashwin) ಮತ್ತೊಂದು ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ತೂಕದಿಂದಲೇ ಗಮನ ಸೆಳೆದ ಕಾರ್ನ್‍ವಾಲ್ ವಿಂಡೀಸ್ ತಂಡಕ್ಕೆ ಆಯ್ಕೆಯಾಗಿದ್ದು ಹೇಗೆ?
Advertisement
Advertisement
ಕೆಲ ದಿನಗಳ ಹಿಂದೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ (WTC) ಫೈನಲ್ ಪಂದ್ಯದಲ್ಲಿ ಬೆಂಚ್ ಕಾದಿದ್ದ ಅಶ್ವಿನ್, ವೆಸ್ಟ್ ಇಂಡೀಸ್ (West Indies) ವಿರುದ್ಧ ಮೊದಲ ಪಂದ್ಯದಲ್ಲಿಯೇ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 24.3 ಓವರ್‌ಗಳಲ್ಲಿ 60 ರನ್ ನೀಡಿ 5 ವಿಕೆಟ್ ಪಡೆದಿದ್ದ ಅಶ್ವಿನ್, 2ನೇ ಇನ್ನಿಂಗ್ಸ್‌ನಲ್ಲಿ 21.3 ಓವರ್‌ಗಳಲ್ಲಿ 71 ರನ್ ನೀಡಿ 7 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ವೃತ್ತಿ ಜೀವನದಲ್ಲಿ 6ನೇ ಬಾರಿ ಟೆಸ್ಟ್ ಕ್ರಿಕೆಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ 5 ವಿಕೆಟ್ ಸಾಧನೆ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?
Advertisement
Advertisement
150, 130ಕ್ಕೆ ಆಲೌಟ್:
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್ ಗಳಿಗೆ ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ ತಂಡ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಸ್ಪಿನ್ ಬೌಲರ್‌ಗ ದಾಳಿಗೆ ಮಕಾಡೆ ಮಲಗಿತು. ಇದರಿಂದ ಐದು ದಿನಗಳ ಕಾಲ ನಡೆಯಬೇಕಿದ್ದ ಮೊದಲ ಟೆಸ್ಟ್ ಪಂದ್ಯ ಮೂರೇ ದಿನಗಳಲ್ಲಿ ಮುಕ್ತಾಯವಾಯಿತು.
ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಮತ್ತೊಮ್ಮೆ ಅಶ್ವಿನ್ ತಮ್ಮ ಸ್ಪಿನ್ ಮೋಡಿಯಿಂದ ಆಘಾತ ನೀಡಿದರು. ವಿಂಡೀಸ್ ಪರ ಅಲಿಕ್ ಅಥಾನಾಜೆ 28 ರನ್, ಜೇಸನ್ ಹೋಲ್ಡರ್ ಅಜೇಯ 20 ರನ್ ಗಳಿಸಿದ್ದು ಬಿಟ್ಟರೆ ಉಳಿದೆಲ್ಲರೂ 20 ರನ್‌ಗಳ ಗಡಿ ದಾಟಲೂ ಆಗದೇ ವಿಕೆಟ್ ಕೈಚೆಲ್ಲಿದರು. ಅಂತಿಮವಾಗಿ 50.3 ಓವರ್‌ಗಳಿಗೆ ವಿಂಡೀಸ್ ತಂಡ ಕೇವಲ 130 ರನ್‌ಗಳಿಗೆ ಆಲೌಟ್ ಆಯಿತು. ಭಾರತ 141 ರನ್‌ಗಳಿಂದ ಗೆದ್ದು ಬೀಗಿತು. ಇದಕ್ಕೂ ಮುನ್ನ ಪ್ರಥಮ ಇನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ಕೇವಲ 150 ರನ್‌ಗಳಿಗೆ ಆಲ್‌ಔಟ್ ಆಗಿತ್ತು.
ಇನ್ನೂ 2ನೇ ದಿನದಾಟದಲ್ಲಿ ಚೊಚ್ಚಲ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 3ನೇ ದಿನ ಚೊಚ್ಚಲ ದ್ವಿಶತಕ ಸಿಡಿಸಿ ಹಲವು ದಾಖಲೆಗಳನ್ನು ಮುರಿಯುವ ಸನಿಹದಲ್ಲಿದ್ದರು. ಆದ್ರೆ 387 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 16 ಬೌಂಡರಿಗಳೊಂದಿಗೆ 171 ರನ್ ಗಳಿಸಿ ಆಡುತ್ತಿದ್ದಾಗ ಸುಲಭ ಕ್ಯಾಚ್‌ಗೆ ತುತ್ತಾದರು. ಆ ನಂತರ ವಿರಾಟ್ ಕೊಹ್ಲಿ 182 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 76 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ರವೀಂದ್ರ ಜಡೇಜಾ ಅಜೇಯ 37 ರನ್, ಇಶಾನ್ ಕಿಶನ್ ಅಜೇಯ 1 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. 3ನೇ ದಿನ ಕ್ರೀಸ್‌ಗಿಳಿದ ಉಪ ನಾಯಕ ಅಜಿಂಕ್ಯ ರಹಾನೆ ಕೇವಲ 3 ರನ್‌ಗಳಿಗೆ ಔಟಾಗಿ ನಿರಾಸೆ ಅನುಭವಿಸಿದರು.
ಸಂಕ್ಷಿಪ್ತ ಸ್ಕೋರ್
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 150/10
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 421/5ಡಿ
ವೆಸ್ಟ್ ಇಂಡೀಸ್ 2ನೇ ಇನ್ನಿಂಗ್ಸ್ 130/10
Web Stories