ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವಿಂಡೀಸ್ ರೋಚಕ ಜಯ ಸಾಧಿಸಿದೆ.
ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ನೀಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 138 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್‌ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು
Advertisement
Advertisement
ಅರಂಭದಿಂದಲೇ ಮಾರಕ ಬೌಲಿಂಗ್ ದಾಳಿ ಮಾಡಿದ ವಿಂಡೀಸ್ ತಂಡದ ಬೌಲರ್‌ಗಳು ಟೀಂ ಇಂಡಿಯಾದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ಕ್ರೀಸ್‌ನಲ್ಲಿ ನಿಲ್ಲದಂತೆ ಕಟ್ಟಿಹಾಕಿದರು. ಪರಿಣಾಮವಾಗಿ 138 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಭಾರತ ಪೇರಿಸಲು ಸಾಧ್ಯವಾಯಿತು. ಈ ಮೊತ್ತವನ್ನು ರಕ್ಷಣೆ ಮಾಡಲು ಭಾರತೀಯ ಬೌಲರ್‌ಗಳು ಕೂಡ ಅಂತಿಮ ಹಂತದವರೆಗೂ ಹೋರಾಡಿದರಾದರೂ ಕೊನೆಯ ಹಂತದಲ್ಲಿ ವಿಂಡೀಸ್ ಗೆದ್ದು ಬೀಗಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ
Advertisement
ಮೆಕಾಯ್ ಮ್ಯಾಜಿಕ್: ಇನ್ನೂ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಆಘಾತ ನೀಡಿದ್ದು ವೆಸ್ಟ್ ಇಂಡೀಸ್ ತಂಡದ ವೇಗಿ ಒಬೆದ್ ಮೆಕಾಯ್. ಪಂದ್ಯದ ಮೊದಲ ಎಸೆತವೇ ಭಾರತ ತಂಡಕ್ಕೆ ಆಘಾತ ನೀಡಿತು. ಪಂದ್ಯದ ಮೊದಲ ಎಸೆತದಲ್ಲಿಯೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಉರುಳಿಸಿದರು. ತಮ್ಮ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದರು. ಅದಾದ ಬಳಿಕ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ವಿಕೆಟ್ ಕಬಳಿಸಿ ಟೀಂ ಇಂಡಿಯಾವನ್ನು ಅಲ್ಪ ಮೊತ್ತದಲ್ಲೇ ಕಟ್ಟಿಹಾಕಿದರು. 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ 6 ವಿಕೆಟ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.
Advertisement
ಬ್ರೆಂಡನ್ ಕಿಂಗ್ ಅರ್ಧ ಶತಕ: ಅದರಂತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. 52 ಎಸೆತಗಳನ್ನು ಎದುರಿಸಿದ ಬ್ರೆಂಡನ್ 68 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಬಳಿಕ ಅಂತಿಮ ಹಂತದಲ್ಲಿ ಡೆವೋನ್ ಥೋಮಸ್ ಸ್ಪೋಟಕ ಪ್ರದರ್ಶನ ನೀಡಿ ಭಾರತದಿಂದ ಗೆಲುವನ್ನು ಕಸಿದರು. ಥೋಮರ್ 19 ಎಸೆತಗಳಲ್ಲಿ ಸ್ಪೋಟಕ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು.
A sensible batting performance from WI in the Powerplay, with regular boundaries every over.
Watch all the action from the India tour of West Indies LIVE, only on #FanCode ???? https://t.co/RCdQk1l7GU@BCCI @windiescricket #WIvIND #INDvsWIonFanCode #INDvsWI pic.twitter.com/RepIUESkzC
— FanCode (@FanCode) August 1, 2022
ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ ನಂತರ ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10 ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್‌ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ರಿಷಭ್ ಪಂತ್ 12 ಎಸೆಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯೊಂದಿಗೆ 24 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇವರಿಬ್ಬೆ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 55 ರನ್‌ಗಳನ್ನು ಗಳಿಸಿತ್ತು. ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.
ಬೌಲಿಂಗ್‌ನಲ್ಲಿ ಅರ್ಶ್‌ದೀಪ್ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್
ಸರಣಿ ಸಮಬಲ: ಇನ್ನು ಈ ಫಲಿತಾಂಶದಿಂದಾಗಿ 5 ಟಿ20 ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2ನೇ ಓವರ್‌ನಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರೂ ಅತಿ ವೇಗವಾಗಿಯೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಐದು ಓವರ್‌ಗಳಲ್ಲಿ 48 ರನ್ ಗಳಿಸಿದ್ದ ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.