ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ಮರಳಿದ್ದಾರೆ.
ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ಸ್ಥಾನ ಪಡೆದಿದ್ದಾರೆ. ಈ ಹಿಂದೆ ವಿಶ್ರಾಂತಿ ನೀಡಲಾಗಿದ್ದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರನ್ನು ಪುನಃ ಟೆಸ್ಟ್ ತಂಡಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ.
Advertisement
ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಬೇಕೆಂದು ಕೇಳಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಆದರೆ ಕೊಹ್ಲಿಗೆ ವಿಶ್ರಾಂತಿ ನೀಡದೇ ಮುಂದುವರಿಸಲಾಗಿದೆ.
Advertisement
ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ:
ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ಅಕ್ಸರ್ ಪಟೇಲ್, ಯುಜುವೇಂದ್ರ ಚಹಲ್, ಕುಲ್‍ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಆಶಿಶ್ ನೆಹ್ರಾ, ಮೊಹಮ್ಮದ್ ಸಿರಾಜ್.
Advertisement
ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ:
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್‍ದೀಪ್ ಯಾದವ್, ಹಾರ್ದಿಕ್ ಪಾಂಡ್ಯಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಈಶಾಂತ್ ಶರ್ಮಾ.
Advertisement
ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯ:
ನಮನ್ ಓಜಾ (ನಾಯಕ, ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಜೀವನ್ ಜೋತ್ ಸಿಂಗ್, ಬಿ ಸಂದೀಪ್, ತನ್ಮಯ್ ಅಗರ್‍ವಾಲ್, ಅಭಿಷೇಕ್ ಗುಪ್ತಾ, ರೋಹನ್ ಪ್ರೇಮ್, ಆಕಾಶ್ ಭಂಡಾರಿ, ಜಲಜ್ ಸಕ್ಸೇನಾ, ಸಿವಿ ಮಿಲಿಂದ್, ಅವೇಶ್ ಖಾನ್, ಸಂದೀಪ್ ವಾರಿಯರ್, ರವಿ ಕಿರಣ್.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ 20 ಪಂದ್ಯ ನವೆಂಬರ್ ಒಂದರನ್ನು ನಡೆಯಲಿದ್ದು, ಮೂರನೇ ಮತ್ತು ಕೊನೆಯ ಪಂದ್ಯ ನವೆಂಬರ್ 7ರಂದು ನಡೆಯಲಿದೆ. ನವೆಂಬರ್ 16ರಿಂದ ಭಾರತ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಕೋಲ್ಕತ್ತಾದಲ್ಲಿ ನಡೆಯಲಿದೆ.
#TeamIndia for first two Test matches against Sri Lanka. The 3-match Test series begins from the 16th of November in Kolkata #INDvSL pic.twitter.com/o2Ib0Qjqzf
— BCCI (@BCCI) October 23, 2017
Board President XI for 2-day warm-up tie against Sri Lanka. The game will be played from the 11-12th of November in Kolkata. pic.twitter.com/FVIujnWPP5
— BCCI (@BCCI) October 23, 2017
#TeamIndia for 3-match T20I series against New Zealand #INDvNZ. The series starts from the 1st of November 2017. pic.twitter.com/R50PAVCBjW
— BCCI (@BCCI) October 23, 2017