ಬ್ರಿಸ್ಬೇನ್: ಆಸ್ಟ್ರೇಲಿಯಾ (India vs Australia) ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, ಭಾರತ 4 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ.
ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳಿಗೆ ಆಲೌಟ್ ಆಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 51 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಇದನ್ನೂ ಓದಿ: ಬೌಲಿಂಗ್‌ಗೆ ಬ್ಯಾನ್ – ಬಾಂಗ್ಲಾ ಬೌಲರ್ ಶಕೀಬ್‌ಗೆ ಐಸಿಸಿ ಶಾಕ್
Advertisement
Advertisement
ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಶುಭಮನ್ ಗಿಲ್ ಕೂಡ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ವಿರಾಟ್ ಕೊಹ್ಲಿ 3 ಹಾಗೂ ರಿಷಭ್ ಪಂತ್ 9 ರನ್ ಗಳಿಸಿ ಔಟಾದರು. ಕೆ.ಎಲ್.ರಾಹುಲ್ ಕ್ರೀಸ್‌ನಲ್ಲಿದ್ದು, 33 ರನ್‌ಗಳಿಸಿ ಏಕಾಂಗಿ ಹೋರಾಟ ಮುಂದುವರಿಸಿದ್ದಾರೆ. ರನ್ ಖಾತೆ ತೆರೆಯದ ನಾಯಕ ರೋಹಿತ್ ಶರ್ಮಾ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
Advertisement
Advertisement
ಆಸ್ಟ್ರೇಲಿಯಾ ಪರ ಸ್ಟಾರ್ಕ್ 2 ವಿಕೆಟ್ ಕಬಳಿಸಿದ್ದಾರೆ. ಹೇಜಲ್ ವುಡ್ ಮತ್ತು ಕಮಿನ್ಸ್ ತಲಾ 1 ವಿಕೆಟ್ ಪಡೆದರು. ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ ಮುಂದುವರಿದಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ 405 ರನ್ – 5 ವಿಕೆಟ್ ಕಿತ್ತು ದಾಖಲೆ ಬರೆದ ಬುಮ್ರಾ