ಆಂಟಿಗುವ: ಅಂಡರ್-19 ಸೆಮಿಫೈನಲ್ನಲ್ಲಿ ಭಾರತ ತಂಡದ ನಾಯಕ ಯಶ್ ಧುಲ್ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾಗೆ 291 ರನ್ಗಳ ಬೃಹತ್ ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಭಾರತ ತಂಡದ ಆರಂಭಿಕ ಆಟಗಾರರಾದ ಆಂಕ್ರಿಶ್ ರಘುವಂಶಿ 6 ರನ್ (30 ಎಸೆತ) ಮತ್ತು ಹರ್ನೂರ್ ಸಿಂಗ್ 16 ರನ್ (28 ಎಸೆತ, 3 ಬೌಂಡರಿ) ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ಒಂದಾದ ಶೇಕ್ ರಶೀದ್ ಮತ್ತು ಯಶ್ ಧುಲ್ ಆಸ್ಟ್ರೇಲಿಯಾ ಬೌಲರ್ಗಳ ಬೆವರಿಳಿಸಿದರು. ಇದನ್ನೂ ಓದಿ: ಐಪಿಎಲ್ ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ
ಇಬ್ಬರು ಆಟಗಾರರು ಕೂಡ ಆಸ್ಟ್ರೇಲಿಯಾ ಬೌಲರ್ಗಳನ್ನು ಮನಬಂದಂತೆ ದಂಡಿಸಿದರು. ರಶೀದ್ 94 ರನ್ (108 ಎಸೆತ, 8 ಬೌಂಡರಿ, 1 ಸಿಕ್ಸ್) ಬಾರಿಸಿ ಶತಕ ವಂಚಿತರಾದರೆ, ಯಶ್ ಧುಲ್ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು.
ಯಶ್ ಧುಲ್ 110 ರನ್ (110 ಎಸೆತ, 10 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ನಂತರ ರಾಜವರ್ಧನ್ ಹಂಗರಗೇಕರ್ 13 ರನ್ (10 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ನಂತರ ಕಡೆಯಲ್ಲಿ ಭರ್ಜರಿಯಾಗಿ ಬ್ಯಾಟ್ಬೀಸಿದ ದಿನೇಶ್ ಬಣ ಅಜೇಯ 20 ರನ್ (4 ಎಸೆತ, 2 ಬೌಂಡರಿ, 2 ಸಿಕ್ಸ್) ಮತ್ತು ನಿಶಾಂತ್ ಸಿಂಧು 12 ರನ್ (10 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡದ ಮೊತ್ತ 280ರ ಗಡಿದಾಟಿಸಿದರು. ಆಸ್ಟ್ರೇಲಿಯಾ ಪರ ಜಾಕ್ ನಿಬ್ಬೆಟ್ ಮತ್ತು ವಿಲಿಯಂ ಸಾಲ್ಜ್ಮನ್ ತಲಾ 2 ವಿಕೆಟ್ ಪಡೆದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್ ಪಟ್ಟಿಯಲ್ಲಿ ಸ್ಥಾನ
ಅಂತಿಮವಾಗಿ ಭಾರತ 50 ಓವರ್ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 290 ರನ್ ಬಾರಿಸಿ, ಆಸ್ಟ್ರೇಲಿಯಾಗೆ 291 ರನ್ ಟಾರ್ಗೆಟ್ ನೀಡಿದೆ.