ಚೆನ್ನೈ: ಟೀಂ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಅತ್ಯುತ್ತಮ ಫೀಲ್ಡಿಂಗ್‍ಗಾಗಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‍ನ (ODI World Cup) ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ ಗೆದ್ದ ಬಳಿಕ ಅವರಿಗೆ ಅತ್ಯುತ್ತಮ ಫಿಲ್ಡಿಂಗ್‍ಗಾಗಿ ತಂಡದ ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಅವರಿಂದ ಪದಕ ಪಡೆದರು.
ಕೋಚ್ ಪದಕ ನೀಡುತ್ತಿರುವ ವೀಡಿಯೋವನ್ನು ಬಿಸಿಸಿಐ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇದೇ ವೇಳೆ ಶ್ರೇಯಸ್ ಅಯ್ಯರ್ ಅವರ ಫೀಲ್ಡಿಂಗ್ ಪ್ರಯತ್ನಗಳಿಗಾಗಿ ಮೆಚ್ಚುಗೆಯನ್ನೂ ದಿಲೀಪ್ ಅವರು ವ್ಯಕ್ತಪಡಿಸಿದರು. ತಂಡದ ಒಟ್ಟಾರೆ ಪ್ರದರ್ಶನವನ್ನು ಅವರು ಶ್ಲಾಘಿಸಿದ್ದಾರೆ.
Advertisement
Advertisement
ಮೊದಲ ಇನ್ನಿಂಗ್ಸ್‌ನಲ್ಲಿ ಸ್ಲಿಪ್‍ನಲ್ಲಿದ್ದ ಕೊಹ್ಲಿ ಮೈದಾನದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಬುಮ್ರಾ ಎಸೆತದಲ್ಲಿ ಹಾರಿ ಮಿಚೆಲ್ ಮಾರ್ಷ್ ಅವರ ಕ್ಯಾಚನ್ನು ಪಡೆದರು. ಈ ಮೂಲಕ ಪಂದ್ಯದಲ್ಲಿ ಭಾರತಕ್ಕೆ ಆರಂಭಿಕ ಮುನ್ನಡೆ ಲಭಿಸಿತು. ಆಸ್ಟ್ರೇಲಿಯಾದ 199 ರನ್‍ಗಳನ್ನು ಬೆನ್ನಟ್ಟಿದ ಭಾರತ 6 ವಿಕೆಟ್‍ಗಳ ಗೆಲುವು ಸಾಧಿಸಿ ಶುಭಾರಂಭ ಮಾಡಿತು.
Advertisement
Advertisement
ಚೇಸಿಂಗ್ ಆರಂಭಿಸಿದ ಭಾರತ 2ನೇ ಓವರ್‍ನಲ್ಲಿ ಕೇವಲ 2 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟ ಅನುಭವಿಸಿತ್ತು. ಬಳಿಕ 4ನೇ ವಿಕೆಟ್‍ಗೆ ಜೊತೆಯಾದ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಜೋಡಿ ಆಟವನ್ನು ಮುಂದುವರಿಸಿತು. 15 ಓವರ್ ಪೂರ್ಣಗೊಂಡರೂ ಭಾರತ 49 ರನ್ ಗಳಿಸಿದ್ದರಿಂದ ಗೆಲವು ಅಸಾಧ್ಯವೆಂದೇ ಅಭಿಮಾನಿಗಳು ನಿರಾಸೆಯಲ್ಲಿದ್ದರು. ಬಳಿಕ ಸಮಯೋಚಿತ ಬ್ಯಾಟಿಂಗ್ ನಿಂದ ಒಂದೊಂದೇ ಬೌಂಡರಿಗಳನ್ನ ಸಿಡಿಸುತ್ತಾ ತಂಡವನ್ನು ಗೆಲುವಿನ ಹಾದಿಯತ್ತ ಮುನ್ನಡೆಸಿದರು.
ಇವರಿಬ್ಬರ ಜೊತೆಯಾಟದಿಂದ ಭಾರತ 35 ಓವರ್‍ಗಳಲ್ಲಿ 151 ರನ್ ಬಾರಿಸಿತ್ತು. 4ನೇ ವಿಕೆಟ್‍ಗೆ ಕೆ.ಎಲ್ ರಾಹುಲ್ ಹಾಗೂ ಕೊಹ್ಲಿ 215 ಎಸೆತಗಳಲ್ಲಿ 165 ರನ್‍ಗಳ ಜೊತೆಯಾಟ ನೀಡಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 85 ರನ್ ಚಚ್ಚಿ ಶತಕ ವಂಚಿರಾದರು. ಇನ್ನೂ ಕೊನೆಯವರೆಗೂ ಹೋರಾಡಿದ ಕೆ.ಎಲ್ ರಾಹುಲ್ 115 ಎಸೆತಗಳಲ್ಲಿ 97 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 11 ರನ್ ಕೊಡುಗೆ ನೀಡಿದರು.
ಮುಂಬರುವ ಪಂದ್ಯದಲ್ಲಿ ಭಾರತವು ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.
Web Stories