– ಶತಕ ಸಿಡಿಸಿ ದಾಖಲೆ ಬರೆದ ವಿರಾಟ್
– ಉತ್ತಮ ಸ್ಥಿತಿಯಲ್ಲಿ ಭಾರತ
ಕೋಲ್ಕತ್ತಾ: ಬಾಂಗ್ಲಾದೇಶದ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲೂ ಭಾರತದ ವೇಗಿ ಇಶಾಂತ್ ಶರ್ಮಾ ಉತ್ತಮ ಬೌಲಿಂಗ್ ಮುಂದುವರಿಸಿದ್ದು, ಭಾರತ ಉತ್ತಮ ಸ್ಥಿತಿಯಲ್ಲಿದೆ.
ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶವು ಎರಡನೇ ದಿನದಾಟದ ಅಂತ್ಯಕ್ಕೆ 32.3 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ, ನಾಳೆಗೆ ಬ್ಯಾಟಿಂಗ್ ಮುಂದುವರಿಸಿದೆ.
Advertisement
That's that from Day 2 as #TeamIndia are now 4 wickets away from victory in the #PinkBallTest
A 4-wkt haul for @ImIshant in the 2nd innings.
Updates – https://t.co/kcGiVn0lZi@Paytm | #INDvBAN pic.twitter.com/kj7azmZYg0
— BCCI (@BCCI) November 23, 2019
Advertisement
ಮೊದಲ ದಿನದಾಟದ ಅಂತ್ಯಕ್ಕೆ ಭಾರತ 46 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ 68 ರನ್‍ಗಳ ಮುನ್ನಡೆ ಸಾಧಿಸಿತ್ತು. 59 ರನ್ ಸಿಡಿಸಿದ್ದ ಕೊಹ್ಲಿ ಹಾಗೂ 23 ರನ್ ಗಳಿಸಿದ್ದ ಅಜಿಂಕ್ಯಾ ರಹಾನೆ ಇಂದು ಬ್ಯಾಟಿಂಗ್ ಮುಂದುರಿಸಿ, 99 ರನ್‍ಗಳ ಜೊತೆಯಾಟ ನೀಡಿದರು. ಆದರೆ ಅಜಿಂಕ್ಯಾ ರಹಾನೆ 69 ಎಸೆತಗಳಲ್ಲಿ 7 ಬೌಂಡರಿ ಸೇರಿ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಸ್ಫೋಟಕ ಬ್ಯಾಟಿಂಗ್ ಮುಂದುವರಿಸುವ 159 ಎಸೆತಗಳಲ್ಲಿ ಶತಕ ಸಿಡಿಸಿದರು.
Advertisement
ವಿರಾಟ್ ದಾಖಲೆ:
ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ ವಿಶ್ವದ 16ನೇ ಬ್ಯಾಟ್ಸ್ ಮನ್ ಮತ್ತು ನಾಯಕನಾಗಿ 5ನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಪಾಕಿಸ್ತಾನದ ಅಜರ್ ಅಲಿ ಡೇ-ನೈಟ್ ಟೆಸ್ಟ್ ಇತಿಹಾಸದಲ್ಲಿ ಮೊದಲ ಶತಕವನ್ನು ಗಳಿಸಿದ್ದರು. ಅವರು ಅಕ್ಟೋಬರ್ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 302 ರನ್ ಗಳಿಸಿದ್ದರು. ಪಾಕಿಸ್ತಾನದ ಅಸಾದ್ ಶಫೀಕ್ ಮಾತ್ರ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಎರಡು ಶತಕಗಳನ್ನು ಗಳಿಸಿದ್ದಾರೆ.
Advertisement
ವಿರಾಟ್ ಕೊಹ್ಲಿ 194 ಎಸೆತಗಳಲ್ಲಿ 18 ಬೌಂಡರಿ ಸೇರಿ 136 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿದ ರವೀಂದ್ರ ಜಡೇಜಾ 12 ರನ್, ವೃದ್ಧಿಮಾನ್ ಸಹಾ ಔಟಾಗದೆ 17 ರನ್ ಗಳಿಸಿದರು ಶಕ್ತವಾದರು. 9 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿದಾಗ
ಕೊಹ್ಲಿ ಡಿಕ್ಲೇರ್ ಘೋಷಿಸಿದರು.
ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ತಂಡಕ್ಕೆ ಭಾರತದ ವೇಗದ ಬೌಲರ್ ಕಾಡಿದರು. ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದಿದ್ದ ಇಶಾಂತ್ ಶರ್ಮಾ ಎರಡನೇ ಇನ್ನಿಂಗ್ಸ್ ನಲ್ಲೂ ಅಮೋಘ ಬೌಲಿಂಗ್ ಪ್ರದರ್ಶನ ಮುಂದುವರಿಸಿದರು. ಇದಕ್ಕೆ ಉಮೇಶ್ ಯಾದವ್ ಕೂಡ ಸಾಥ್ ನೀಡಿದರು.
ಎರಡನೇ ಇನ್ನಿಂಗ್ಸ್ ನ ಆರಂಭದಲ್ಲೇ ಬಾಂಗ್ಲಾ 7ನೇ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿತ್ತು. ಬಳಿಕ ಮೊಹಮ್ಮದುಲ್ಲಾ ಹಾಗೂ ಮುಷ್ಫಿಕುರ್ ರಹೀಂ 5ನೇ ವಿಕೆಟ್ ನಷ್ಟಕ್ಕೆ 69 ರನ್‍ಗಳ ಜೊತೆಯಾಟ ನೀಡಿದರು. ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಮೊಹಮ್ಮದುಲ್ಲಾ 41 ಎಸೆತಗಳಲ್ಲಿ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಬಾಂಗ್ಲಾದೇಶವು ಎರಡನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟದಿಂದ 152 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಮುಂದುವರಿಸಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಇಶಾಂತ್ ಶರ್ಮಾ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 2 ವಿಕೆಟ್ ಕಿತ್ತಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಇಶಾಂತ್ ಶರ್ಮಾ 5 ವಿಕೆಟ್, ಉಮೇಶ್ ಯಾದವ್ 3 ಹಾಗೂ ಮೊಹಮ್ಮದ್ ಶಮಿ 2 ವಿಕೆಟ್ ಪಡೆದಿದ್ದರು.
Here comes the breakthrough.@ImIshant has his 4th. #TeamIndia 5 wickets away from victory.#PinkBallTest pic.twitter.com/qYe4UaVwM0
— BCCI (@BCCI) November 23, 2019