ಲಂಡನ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಗೆದ್ದಿರುವ ಭಾರತಕ್ಕೆ ಇಂದು ಎರಡನೇ ಸವಾಲು ಎದುರಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ ಇದೆ.
Advertisement
ಮೊದಲ ಟಿ20 ಪಂದ್ಯದಲ್ಲಿ 50 ರನ್‍ಗಳ ಭರ್ಜರಿ ಜಯದೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಭಾರತ ತಂಡ ಇಂದು ನಡೆಯಲಿರುವ 2ನೇ ಪಂದ್ಯವನ್ನು ಗೆದ್ದು 3 ಪಂದ್ಯಗಳ ಟಿ20 ಸರಣಿಯನ್ನು ಕೈವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಇಂಗ್ಲೆಂಡ್ ತಂಡ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಪ್ಲಾನ್ ಮಾಡುತ್ತಿದೆ. ಇದನ್ನೂ ಓದಿ: T20 ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ನಾಯಕನಾಗಿ ಈವರೆಗೆ ಯಾರೂ ಮಾಡದ ದಾಖಲೆ ಬರೆದ ರೋಹಿತ್ ಶರ್ಮಾ
Advertisement
Advertisement
ಈ ನಡುವೆ 2ನೇ ಟಿ20 ಪಂದ್ಯಕ್ಕೆ ಭಾರತ ತಂಡ ಪೂರ್ಣ ಪ್ರಮಾಣದ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ತಂಡಕ್ಕೆ ವಾಪಸ್ ಆಗಿದ್ದಾರೆ. ಹಾಗಾಗಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ 11 ಆಯ್ಕೆಯ ಸವಾಲು ಎದುರಾಗಿದೆ. ಇದನ್ನೂ ಓದಿ: 51 ರನ್ ಚಚ್ಚಿ 4 ವಿಕೆಟ್ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು
Advertisement
ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಥವಾ ದೀಪಕ್ ಹೂಡಾ, ಶ್ರೇಯಸ್ ಅಯ್ಯರ್ ಅಥವಾ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಚಹಾಲ್, ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಪಂತ್ ಮತ್ತು ಬುಮ್ರಾಗಾಗಿ ಮೊದಲ ಪಂದ್ಯವಾಡಿದ್ದ ದಿನೇಶ್ ಕಾರ್ತಿಕ್ ಮತ್ತು ಹರ್ಷದೀಪ್ ಸಿಂಗ್ ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಹೆಚ್ಚಿದೆ.
ಇಂಗ್ಲೆಂಡ್ ತಂಡ ಮೊದಲ ಪಂದ್ಯ ಸೋತಿರುವುದರಿಂದಾಗಿ ಕಂಬ್ಯಾಕ್ ಮಾಡಲು ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‍ಸ್ಟೋನ್, ಹ್ಯಾರಿ ಬ್ರೂಕ್, ಸ್ಯಾಮ್ ಕರಾನ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ರಿಚರ್ಡ್ ಗ್ಲೀಸನ್, ಮ್ಯಾಟ್ ಪಾರ್ಕಿನ್ಸನ್ ಅವರನ್ನೊಳಗೊಂಡ ತಂಡವನ್ನು ಮತ್ತೊಮ್ಮೆ ಮುಂದುವರಿಸಲು ಬಟ್ಲರ್ ನಿರ್ಧರಿಸಬಹುದು.
ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿರುವುದರಿಂದಾಗಿ ಎರಡನೇ ಪಂದ್ಯದಲ್ಲೂ ರನ್ ಹೊಳೆ ಹರಿಯುವ ನಿರೀಕ್ಷೆ ಇದ್ದು, ಪಂದ್ಯ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.