ಲಂಡನ್: ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಗೆಲುವು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇಂದು ಸರಣಿ ಜಯಕ್ಕಾಗಿ ಸೆಣಸಲಿವೆ.
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ರ ವೇಳೆಗೆ ಪಂದ್ಯ ಆರಂಭವಾಗಲಿದ್ದು, 2ನೇ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ ಶಾಕ್‌ನಿಂದ ಕಂಗೆಟ್ಟಿರುವ ಭಾರತ ಅಂತಿಮ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಪ್ಲಾನ್ ಬದಲಿಸಿಕೊಂಡು ಸರಣಿ ಜಯದ ಎದುರು ನೋಡುತ್ತಿದೆ. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್
Advertisement
Advertisement
ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ 2ನೇ ಪಂದ್ಯದಲ್ಲಿ ಸೋಲು ಕಂಡಿತು. 247 ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ರೋಹಿತ್ ಶರ್ಮಾ ಪಡೆ 100 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್ ಪಾಂಡ್ಯ, ಜಡೇಜಾ ಹೋರಾಡಿದರೂ ಅವರ ಬ್ಯಾಟಿಂಗ್ ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಗಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಟಿ20 ಮಾದರಿಯಂತೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಭಾರತ ಮುಂದಾಗಿದೆ.
Advertisement
Advertisement
ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 2ನೇ ಪಂದ್ಯದಲ್ಲಿ ನಿರೀಕ್ಷಿತ ಆಟವಾಡದೇ ಇರುವುದು ತಂಡಕ್ಕೆ ಹಿನ್ನಡೆ ಉಂಟು ಮಾಡಿತು. ಅಲ್ಲದೆ ವಿರಾಟ್ ಕೊಹ್ಲಿ ಸಹ ಅಲ್ಪಮೊತ್ತಕ್ಕೆ ನಿರ್ಗಮಿಸಿದ್ದರು. ಅಂತಿಮ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಿಂದ ಆಟಗಾರರಿಂದಲೂ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ
ಜಸ್ಪ್ರಿತ್ ಬುಮ್ರಾ ನೇತೃತ್ವದ ಬೌಲಿಂಗ್ ಪಡೆ ಉತ್ತಮ ಲಯದಲ್ಲಿದೆಯಾದರೂ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಇನ್ನಿಂಗ್ಸ್ ಮಧ್ಯದಲ್ಲಿ ಜೊತೆಯಾಟಗಳನ್ನು ಮುರಿಯುವುದರಲ್ಲಿ ಭಾರತ ಹಿಂದೆ ಬೀಳುತ್ತಿದೆ.
ಮತ್ತೊಂದೆಡೆ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡಲು ಕಾಯುತ್ತಿದೆ. ಟಿ20 ನಲ್ಲಿ ಭಾರತದ ವಿರುದ್ಧ ಸೋಲು ಕಂಡ ಇಂಗ್ಲೆಂಡ್ ಇದೀಗ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತದ ವಿರುದ್ಧ ಸೇಡು ತೀರಿಕೊಳ್ಳಲು ಕಾತರವಾಗಿದೆ.
Live Tv