ಓವೆಲ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ 191 ರನ್‍ಗಳ ಸಾಧಾರಣ ಮೊತ್ತಕ್ಕೆ ಆಲ್‍ಔಟ್ ಆಗಿದೆ.
Advertisement
ಟಾಸ್ ಗೆದ್ದ ಇಂಗ್ಲೆಂಡ್ ಭಾರತವನ್ನು ಬ್ಯಾಟಿಂಗ್ ಆಹ್ವಾನಿಸಿತು. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 11 ರನ್(27 ಎಸೆತ, 1 ಬೌಂಡರಿ) ಬಾರಿಸಿ ವಿಕೆಟ್ ಒಪ್ಪಿಸಿದರು. ಇವರ ಹಿಂದೆಯೇ ಜೊತೆಗಾರ ಕೆಎಲ್. ರಾಹುಲ್ 17 ರನ್(44 ಎಸೆತ, 3 ಬೌಂಡರಿ) ಬಾರಿಸಿ ಔಟ್ ಆದರು. ಬಳಿಕ ಬಂದ ಚೇತೇಶ್ವರ ಪೂಜಾರ 4 ರನ್(31 ಎಸೆತ, 1 ಬೌಂಡರಿ) ಮಾಡಿ ನಿರಾಸೆ ಮೂಡಿಸಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರು ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 50 ರನ್ (96 ಎಸೆತ, 8 ಬೌಂಡರಿ) ಅರ್ಧಶತಕ ಸಿಡಿಸಿ ರಾಬಿನ್ಸನ್‍ಗೆ ವಿಕೆಟ್ ಒಪ್ಪಿಸಿದರು. ಈ ಮೊದಲು ಕೊಹ್ಲಿ 1 ರನ್ ಸಿಡಿಸುತ್ತಿದ್ದಂತೆ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ 23 ಸಾವಿರ ರನ್ ಸಿಡಿಸಿದ ನೂತನ ದಾಖಲೆ ನಿರ್ಮಿಸಿದರು. ಇದನ್ನೂ ಓದಿ: ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಸ್ಮಾರ್ಟ್ ಬಾಲ್
Advertisement
Advertisement
ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್ ಗಳಾದ ರವೀಂದ್ರ ಜಡೇಜಾ 10 ರನ್(34 ಎಸೆತ, 2 ಬೌಂಡರಿ), ಅಜಿಂಕ್ಯಾ ರಹಾನೆ 14 ರನ್ (47 ಎಸೆತ, 1 ಬೌಂಡರಿ) ರಿಷಬ್ ಪಂತ್ 9 ರನ್(33 ಎಸೆತ, 1 ಬೌಂಡರಿ)ಗಳಿಗೆ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಶಾರ್ದೂಲ್ ಠಾಕೂರ್ ಭಾರತಕ್ಕೆ ಆಸರೆಯಾದರು. ಉತ್ತಮವಾಗಿ ಬ್ಯಾಟ್ ಬೀಸಿದ ಠಾಕೂರ್ 57ರನ್(36 ಎಸೆತ, 7 ಬೌಂಡರಿ, 3 ಸಿಕ್ಸ್) ವೇಗವಾಗಿ ರನ್ ಗಳಿಸಿ ಅರ್ಧಶತಕ ಹೊಡೆದು ಮಿಂಚಿದರು. ಅಂತಿಮವಾಗಿ ಭಾರತ ತಂಡ 61.3 ಓವರ್ ಗಳಲ್ಲಿ 191 ರನ್‍ಗೆ ಸರ್ವಪತನ ಕಂಡಿತು. ಇದನ್ನೂ ಓದಿ: ವಿಶೇಷ ಅತಿಥಿಯನ್ನು ಹಿಡಿದುಕೊಂಡು ಪೃಥ್ವಿ ಶಾ ಪ್ರಯಾಣ
Advertisement
Shardul Thakur's entertaining knock comes to an end on 57.
Live – https://t.co/OOZebPnBZU #ENGvIND pic.twitter.com/eFVovn3Wvb
— BCCI (@BCCI) September 2, 2021
ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್ 4 ವಿಕೆಟ್ ಮತ್ತು ಒಲಿ ರಾಬಿನ್ಸನ್ 3 ವಿಕೆಟ್ ಕಿತ್ತು ಮಿಂಚಿದರು. ಜೇಮ್ಸ್ ಆಂಡರ್ಸನ್ ಮತ್ತು ಕ್ರೇಗ್ ಓವರ್ಟನ್ ತಲಾ 1 ವಿಕೆಟ್ ಪಡೆದರು.