ಲಂಡನ್: ಇಂಗ್ಲೆಂಡ್ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ವೇಗಿ ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.
Advertisement
ಖಾಯಂ ನಾಯಕ ರೋಹಿತ್ ಶರ್ಮಾ ಕೊರೊನಾದಿಂದಾಗಿ ಟೆಸ್ಟ್ ಪಂದ್ಯದಿಂದ ಹೊರ ಬಿದ್ದಿದ್ದು, ಅವರ ಬದಲಿಗೆ ಬುಮ್ರಾಗೆ ನಾಯಕತ್ವದ ಹೊಣೆ ಹೊರಿಸಲಾಗಿದೆ. ಜೊತೆಗೆ ರಿಷಭ್ ಪಂತ್‍ಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ಇದನ್ನೂ ಓದಿ: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?
Advertisement
Advertisement
ಈ ಬಗ್ಗೆ ಬಿಸಿಸಿ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದೆ. ಜೊತೆಗೆ ಕೋಚ್ ರಾಹುಲ್ ದ್ರಾವಿಡ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ರೋಹಿತ್ ಸೋಂಕಿನಿಂದ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದೆ ಇರುವುದರಿಂದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ ಎಂದರು. ಇದನ್ನೂ ಓದಿ: ನಾಳೆಯಿಂದ ಭಾರತ – ಇಂಗ್ಲೆಂಡ್ ಹೈವೋಲ್ಟೇಜ್ ಟೆಸ್ಟ್ ಕ್ರಿಕೆಟ್: ಬುಮ್ರಾಗೆ ನಾಯಕನ ಪಟ್ಟ
Advertisement
NEWS ???? – @Jaspritbumrah93 to lead #TeamIndia in the fifth Test Match against England.@RishabhPant17 will be the vice-captain for the match.#ENGvIND pic.twitter.com/ueWXfOMz1L
— BCCI (@BCCI) June 30, 2022
ಈ ಮೂಲಕ ಕಪಿಲ್ ದೇವ್ ಬಳಿಕ ಮತ್ತೊಮ್ಮೆ ವೇಗದ ಬೌಲರ್‌ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ಇದರೊಂದಿಗೆ ಬುಮ್ರಾ 35 ವರ್ಷಗಳ ಬಳಿಕ ಬೌಲರ್ ಒಬ್ಬ ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.