ಲಂಡನ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 49 ರನ್‍ಗಳ ಭರ್ಜರಿ ಜಯಗಳಿಸಿದ ಬಳಿಕ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ನಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಕಾಣಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. 2ನೇ ಟಿ20 ಪಂದ್ಯ ಗೆದ್ದ ಬಳಿಕ ಧೋನಿ ಭಾರತ ತಂಡದ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಟೀಂ ಇಂಡಿಯಾ ಆಟಗಾರೊಂದಿಗೆ ಮಾತನಾಡಿದ್ದಾರೆ. ಧೋನಿ ತಂಡದ ಆಟಗಾರೊಂದಿಗಿರುವ ಫೋಟೋವನ್ನು ಬಿಸಿಸಿಐ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಆಂಗ್ಲರ ವಿರುದ್ಧ 49 ರನ್‌ಗಳ ಜಯ- ಸರಣಿ ಗೆದ್ದ ಭಾರತ
Always all ears when the great @msdhoni talks! 👍 👍#TeamIndia | #ENGvINDpic.twitter.com/YKQS8taVcH
— BCCI (@BCCI) July 9, 2022
ನಿನ್ನೆ ನಡೆದ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ ಇಂಗ್ಲೆಂಡ್‍ಗೆ 171 ರನ್‍ಗಳ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಭಾರತದ ಬೌಲರ್‌ಗಳ ಬಿಗಿ ದಾಳಿಗೆ ನಲುಗಿ ಕೇವಲ 121 ರನ್‍ಗಳಿಗೆ ಗಂಟುಮೂಟೆ ಕಟ್ಟಿ ಸೋಲನುಭವಿಸಿತು. ಭಾರತ ತಂಡ 49 ರನ್‍ಗಳ ಅಂತರದ ಜಯದೊಂದಿಗೆ ತವರಿನ ತಂಡಕ್ಕೆ ಟಕ್ಕರ್ ನೀಡಿತು. ಇದನ್ನೂ ಓದಿ: ರಿಮೋಟ್ ಕಂಟ್ರೋಲ್ ಕಾರ್ ಮೂಲಕ ಗ್ರೌಂಡ್‌ಗೆ ಪ್ರವೇಶಿಸಿತು ಕ್ರಿಕೆಟ್ ಚೆಂಡು
ಭಾರತದ ಪರ ರವೀಂದ್ರ ಜಡೇಜಾ ಅಜೇಯ 46 ರನ್ (29 ಎಸೆತ, 5 ಬೌಂಡರಿ) ಸಿಡಿಸಿ ಬ್ಯಾಟಿಂಗ್‍ನಲ್ಲಿ ಮಿಂಚಿದರೆ, ಬೌಲಿಂಗ್‍ನಲ್ಲಿ ಭುವನೆಶ್ವರ್ ಕುಮಾರ್ 3 ವಿಕೆಟ್, ಬುಮ್ರಾ ಮತ್ತು ಚಹಾಲ್ ತಲಾ 2 ವಿಕೆಟ್ ಕಿತ್ತು ಗೆಲುವು ತಂದುಕೊಟ್ಟರು.












