ಭಾರತ-ಇಂಗ್ಲೆಂಡ್ ಸೆಮಿ ಸಮರ – ಗೆದ್ದವರು ಫೈನಲ್‍ಗೆ ಸೋತವರು ಮನೆಗೆ

Advertisements

ಆಡಿಲೇಡ್: ಟಿ20 ವಿಶ್ವಕಪ್‍ನ (T20 World Cup)  ಎರಡನೇ ಸೆಮಿಫೈನಲ್ (Semi-Final) ಕಾದಾಟದಲ್ಲಿ ಇಂದು ಭಾರತ (India) ಹಾಗೂ ಇಂಗ್ಲೆಂಡ್ (Englan) ಕಾದಾಡುತ್ತಿದೆ. ವಿಶ್ವಕ್ರಿಕೆಟ್ ಪ್ರೇಮಿಗಳ ಚಿತ್ತ ಆಡಿಲೇಡ್‍ನತ್ತ (Adelaide) ನೆಟ್ಟಿದೆ.

Advertisements

ಇಂದು ಗೆದ್ದ ತಂಡ ಫೈನಲ್‍ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದೆ. ಭಾರತಕ್ಕೆ ಬ್ಯಾಟಿಂಗ್ ಬಲವಾದರೆ, ಅತ್ತ ಇಂಗ್ಲೆಂಡ್‍ಗೆ ಆಲ್‍ರೌಂಡರ್‌ಗಳ ಬಲವಿದೆ. ಹಾಗಾಗಿ ಈ ಪಂದ್ಯ ಬಹಳ ರೋಚಕತೆಯನ್ನು ಮೂಡಿಸಿದೆ. ಇದನ್ನೂ ಓದಿ: ಕಿವೀಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – 3ನೇ ಬಾರಿ ಫೈನಲ್‍ಗೇರಿದ ಪಾಕ್

Advertisements

ಭಾರತಕ್ಕೆ ರೋಹಿತ್, ರಾಹುಲ್, ಕೊಹ್ಲಿ, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಶಕ್ತಿಯಾದರೆ, ಅತ್ತ ಅಲೆಕ್ಸ್ ಹೇಲ್ಸ್, ಬಟ್ಲರ್, ಅಲಿ, ಬೆನ್‍ಸ್ಟೋಕ್ಸ್ ಬ್ಯಾಟಿಂಗ್ ಬಿರುಗಾಳಿಗಳು ಹಾಗಾಗಿ ಆಡಿಲೇಡ್‍ನಲ್ಲಿ ರನ್ ಮಳೆ ಸುರಿಯುವ ಸಾಧ್ಯತೆ ಇದೆ. ಇಂದು ಗೆದ್ದ ತಂಡ ನ.13 ರಂದು ಈಗಾಗಲೇ ಫೈನಲ್ ಪ್ರವೇಶಿಸಿರುವ ಪಾಕಿಸ್ತಾನ ತಂಡವನ್ನು ಎದುರಿಸಲಿದ್ದು, ಸೋತ ತಂಡ ಮನೆ ದಾರಿ ಹಿಡಿಯಲಿದೆ. ಇದನ್ನೂ ಓದಿ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್?

Advertisements

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದ್ದು, 2013ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬಳಿಕ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಇದೀಗ ಇಂಗ್ಲೆಂಡ್ ಮಣಿಸಿ, ಫೈನಲ್ ಪ್ರವೇಶಿಸಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿ ಭಾರತವಿದ್ದರೆ, ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಬೇಕಾದ ಸವಾಲು ಟೀಂ ಇಂಡಿಯಾ ಮುಂದಿದೆ. ಇತ್ತ ಅಭಿಮಾನಿಗಳೂ ಕೂಡ ಇದೆ ಆಸೆಯಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಭಾರತ ಗೆದ್ದು ಫೈನಲ್‍ನಲ್ಲಿ ಪಾಕಿಸ್ತಾನವನ್ನು ಎದುರಿಸಲಿ ಎಂದು ಬೇಡಿಕೊಳ್ಳುತ್ತಿದ್ದಾರೆ.

Live Tv

Advertisements
Exit mobile version